ಶುಕ್ರವಾರ, ಡಿಸೆಂಬರ್ 2, 2022
20 °C
ಹದಗೆಡುತ್ತಿರುವ ಗಾಳಿ ಗುಣಮಟ್ಟ

ವಾಯುಮಾಲಿನ್ಯ: ನೋಯ್ಡಾದಲ್ಲಿ ಆನ್‌ಲೈನ್‌ ತರಗತಿಗೆ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ದಿನೇ ದಿನೇ ಹದಗೆಡುತ್ತಿರು ವುದರಿಂದ ಮಕ್ಕಳ ಹೊರಾಂಗಣ ಚಟುವಟಿಕೆಗಳನ್ನು ನಿರ್ಬಂಧಿಸಲು ಶಾಲಾ ಆಡಳಿತ ಮಂಡಳಿಗಳು ತೀರ್ಮಾನಿಸಿವೆ. 

ನೋಯ್ಡಾ ಮತ್ತು ಗ್ರೇಟರ್‌ ನೋಯ್ಡಾದಲ್ಲಿನ ಎಲ್ಲ ಶಾಲೆಗಳು ನ.8ರ ತನಕ 8ನೇ ತರಗತಿ ವರೆಗೆ ಆನ್‌ಲೈನ್‌ ಮೂಲಕ ಬೋಧನೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

9ರಿಂದ 12ನೇ ತರಗತಿ ವರೆಗಿನ ಬೋಧನೆಯನ್ನು ಸಾಧ್ಯವಾದಷ್ಟು ಆನ್‌ಲೈನ್‌ ಮೂಲಕವೇ ನಡೆಸುವಂತೆಯೂ ಸೂಚಿಸಲಾಗಿದೆ.

‘ದೆಹಲಿ ನಗರ ವ್ಯಾಪ್ತಿಯ ಗಾಳಿಯ ಗುಣಮಟ್ಟ ಗುರುವಾರ ಮತ್ತಷ್ಟು ಬಿಗಡಾಯಿಸಿದೆ’ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. 

ನಿಷೇಧ: ಮಾಲಿನ್ಯ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಂಡಿರುವ ಕಮಿಷನ್‌ ಫಾರ್‌ ಏರ್‌ ಕ್ವಾಲಿಟಿ ಮ್ಯಾನೇಜ್‌ಮೆಂಟ್‌ (ಸಿಎಕ್ಯೂಎಂ) ನಗರದೊಳಗೆ ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಡೀಸೆಲ್‌ ಚಾಲಿತ ಲಘು ವಾಹನಗಳ ಸಂಚಾರವನ್ನೂ ನಿಷೇಧಿಸಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು