ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆ.28ರವರೆಗೆ ವಿಸ್ತರಣೆ

Last Updated 28 ಜನವರಿ 2021, 17:01 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಸೋಂಕು ಪಸರಿಸುವಿಕೆಯನ್ನು ನಿಯಂತ್ರಿಸಲು ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ವಿಧಿಸಿರುವ ನಿರ್ಬಂಧವನ್ನು ಫೆಬ್ರುವರಿ 28ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಗುರುವಾರ ತಿಳಿಸಿದೆ.

‘ಆದರೆ, ಕೆಲವೊಂದು ಪ್ರಕರಣಗಳನ್ನು ಗಮನಿಸಿ, ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು’ ಎಂದು ಡಿಜಿಸಿಎ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವುದಕ್ಕಾಗಿ ಮಾರ್ಚ್ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಶೇಷ ಅಂತರರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

ಡಿಜಿಸಿಎ ಹೊರಡಿಸಿರುವ ಹೊಸ ಆದೇಶ ಅಂತರರಾಷ್ಟ್ರೀಯ ಸರಕು ಸಾಗಾಣೆ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT