ಬುಧವಾರ, ಅಕ್ಟೋಬರ್ 5, 2022
26 °C

ಮಹಾರಾಷ್ಟ್ರ: ಅನುಮಾನಾಸ್ಪದ ಬೋಟ್‌ನಲ್ಲಿ 3 ಎಕೆ–47 ರೈಫಲ್, ಬುಲೆಟ್‌ಗಳು ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಹರಿಹರೇಶ್ವರ ಬೀಚ್‌ನಲ್ಲಿ ಪತ್ತೆಯಾಗಿರುವ ಅನುಮಾನಾಸ್ಪದ ಬೋಟ್‌ನಲ್ಲಿ 3 ಎಕೆ–47 ರೈಫಲ್, ಬುಲೆಟ್‌ಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಿಂದ 190 ಕಿ.ಮೀ ದೂರದ ಶ್ರೀವರ್ಧನ್ ಪ್ರದೇಶದಲ್ಲಿ ಯಾವುದೇ ಸಿಬ್ಬಂದಿ ಇಲ್ಲದ ಹಡಗನ್ನು ಕಂಡ ಸ್ಥಳೀಯರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ರಾಯಗಡದ ಎಸ್‌ಪಿ ಅಶೋಕ್ ದುಧೆ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಡಗಿನ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ, ಹಡಗಿನಲ್ಲಿ 3 ಎಕೆ– 47 ರೈಫಲ್ಸ್ ಮತ್ತು ಬುಲೆಟ್‌ಗಳು ಪತ್ತೆಯಾಗಿವೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಡಗಿನ ಸಿಬ್ಬಂದಿಯನ್ನು ಈ ವರ್ಷದ ಜೂನ್‌ನಲ್ಲಿ ಒಮನ್ ಕಡಲ ತೀರದಲ್ಲಿ ರಕ್ಷಿಸಲಾಗಿದೆ.ಹಡಗು ತೇಲಿಕೊಂಡು ರಾಯಗಡ ಕಡಲ ತೀರಕ್ಕೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು