ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗರಕ್ಷಕ ಸಾವಿನ ಪ್ರಕರಣ: ಸುವೇಂದು ಅಧಿಕಾರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

Last Updated 6 ಸೆಪ್ಟೆಂಬರ್ 2021, 13:31 IST
ಅಕ್ಷರ ಗಾತ್ರ

ಕೋಲ್ಕತ್ತ: ಅಂಗರಕ್ಷಕ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಕಲ್ಕತ್ತಾ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನಿಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಿಐಡಿಯು ಅಧಿಕಾರಿ ಅವರಿಗೆ ಸಮನ್ಸ್ ನೀಡಿತ್ತು. ಆದರೆ ಅವರು ವಿಚಾರಣೆಗೆ ಗೈರಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.

ಸಿಐಡಿ ನೀಡಿದ್ದ ಸಮನ್ಸ್‌ಗೆ ಸಂಬಂಧಿಸಿ ಸುವೇಂದು ವಿರುದ್ಧ ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ಅವರನ್ನು ಬಂಧಿಸಬಾರದು ಎಂದು ಹೈಕೋರ್ಟ್ ಹೇಳಿದೆ ಎಂದು ಅಧಿಕಾರಿ ಅವರ ವಕೀಲರು ತಿಳಿಸಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.

ಸುವೇಂದು ಅವರ ಅಂಗರಕ್ಷಕರಾಗಿದ್ದ ಸುಭಬ್ರತಾ ಚಕ್ರವರ್ತಿ 2018ರಲ್ಲಿ ಸುವೇಂದು ಅವರ ಕಾಂತಿ ನಿವಾಸದಲ್ಲಿ ತಮ್ಮ ಸರ್ವಿಸ್‌ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT