ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಷಾ ಭೇಟಿ ಮಾಡಿದ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳ ಚುನಾವಣೆ ನಂತರ ಮೊದಲ ಬಾರಿಗೆ ಬಿಜೆಪಿ ನಾಯಕರ ಭೇಟಿಯಾಗುತ್ತಿರುವ ಸುವೇಂದು
Last Updated 8 ಜೂನ್ 2021, 9:53 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ನಡೆದಿರುವ ಕೆಲವು ವಿದ್ಯಮಾನಗಳ ಕುರಿತು ಚರ್ಚಿಸಿದರು.

ಅಧಿಕಾರಿ ಮತ್ತು ಶಾ ಅವರ ಭೇಟಿಯನ್ನು ಖಚಿತ ಪಡಿಸಿರುವ ಗೃಹ ಸಚಿವಾಲಯದ ಕಾರ್ಯಾಲಯ, ‘ಸುವೇಂದು ಅಧಿಕಾರಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ‘ ಎಂಬ ಒಕ್ಕಣೆ ಹಾಗೂ ಅಮಿತ್‌ ಶಾ ಅವರೊಂದಿಗೆ ಸುವೇಂದು ಅಧಿಕಾರಿ ಇರುವ ಫೋಟೊಗಳೊಂದಿಗೆ ಟ್ವೀಟ್ ಮಾಡಿದೆ.

ಈ ವರ್ಷ ಮಾರ್ಚ್‌–ಏಪ್ರಿಲ್‌ನಲ್ಲಿ ನಡೆದ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಜಯಗಳಿಸಿ, ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರ ಸುವೇಂದು ಅಧಿಕಾರಿ ಮೊದಲ ಬಾರಿಗೆ ಗೃಹ ಸಚಿವರು ಹಾಗೂ ಮತ್ತೊಬ್ಬ ಕೇಂದ್ರ ಸಚಿವ ಮನ್‌ಸುಖ್‌ ಮಾಂಡಿವಿಯಾ ಅವರನ್ನು ಭೇಟಿಯಾಗಿದ್ದಾರೆ. ನಂತರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

‘ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಕೆಲವು ವಿದ್ಯಮಾನಗಳ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸಿದೆ. ಈ ಹಿಂದೆಯೂ ಪಶ್ಚಿಮ ಬಂಗಾಳದ ಜತೆಗಿದ್ದೆವು. ಮುಂದೆಯೂ ಇರುತ್ತೇವೆ‘ ಎಂದು ಸಚಿವರು ಭರವಸೆ ನೀಡಿರುವುದಾಗಿ ಸುವೇಂದು ಅಧಿಕಾರಿ ಟ್ವೀಟ್‌ ಮಾಡಿದ್ದಾರೆ.

‘ಯಸ್‘ ಚಂಡ ಮಾರುತದಿಂದಾದ ಹಾನಿ ಕುರಿತು ಪ್ರಧಾನಿಯವರ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾದ ಘಟನೆ ನಂತರ, ಸುವೇಂದು ಅಧಿಕಾರಿ, ಬಿಜೆಪಿಯ ಉನ್ನತ ಅಧಿಕಾರಿಗಳನ್ನು ಮೊದಲ ಬಾರಿಗೆ ಭೇಟಿಯಾಗುತ್ತಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಸಚಿವರೂ ಆಗಿದ್ದ ಸುವೇಂದು ಅಧಿಕಾರಿ ಅವರು 2021ರ ವಿಧಾನಸಭಾ ಚುನಾವಣೆ ವೇಳೆ, ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT