ಸುವೇಂದು ಸೇರಿ ಬಿಜೆಪಿ ಶಾಸಕರ ಸಭಾತ್ಯಾಗ: ಶಿಸ್ತಿಲ್ಲ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಮತ್ತು ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸೋಲನುಭವಿಸಿರುವ ಬಗ್ಗೆ ಪ್ರಸ್ತಾಪಿಸಲು ನಾನು ಮುಂದಾಗಿದ್ದೆ. ಆದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಲಿಲ್ಲ. ಮತ್ತೆ ನಾನ್ಯಾಕೆ ಇಲ್ಲಿರಬೇಕು ಎಂದು ಸುವೇಂದು ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಓದಿ: ಪಶ್ಚಿಮ ಬಂಗಾಳ: ರಾಜ್ಯಪಾಲರ ಭಾಷಣಕ್ಕೆ ಬಿಜೆಪಿ ಶಾಸಕರಿಂದ ಅಡ್ಡಿ
ಈ ಮಧ್ಯೆ, ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದ ಬಿಜೆಪಿ ಶಾಸಕರ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರಿಗೆ ಸೌಜನ್ಯ, ಶಿಸ್ತು ಇಲ್ಲ ಎಂದು ಅವರು ಟೀಕಿಸಿದ್ದಾರೆ.
ಹೊಸದಾಗಿ ರಚನೆಯಾದ ಪಶ್ಚಿಮ ಬಂಗಾಳದ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರ ಭಾಷಣಕ್ಕೆ ಬಿಜೆಪಿಯ ಶಾಸಕರು ಅಡ್ಡಿಪಡಿಸಿದ್ದರು.
LoP Suvendu Adhikari and other BJP MLAs walk out from West Bengal Assembly following an exchange of words between the treasury bench and him.
"I raised the issue of CM losing Nandigram. Speaker said the matter is subjudice. I said then why I should stay here," Adhikari says pic.twitter.com/aok9TVCfPt
— ANI (@ANI) July 6, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.