ಟಿಎಂಸಿ ಪಕ್ಷದ ಸದಸ್ಯತ್ವಕ್ಕೂ ಸುವೇಂದು ರಾಜೀನಾಮೆ

ಕೋಲ್ಕತ್ತ: ಶಾಸಕ ಸ್ಥಾನಕ್ಕೆ ಬುಧವಾರವಷ್ಟೇ ರಾಜೀನಾಮೆ ನೀಡಿದ್ದ ಪಶ್ಚಿಮ ಬಂಗಾಳದ ಪ್ರಮುಖ ನಾಯಕ ಸುವೇಂದು ಅಧಿಕಾರಿ ಗುರುವಾರ ಟಿಎಂಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದರು.
ಮೂಲಗಳ ಪ್ರಕಾರ, ಅವರು ಟಿಎಂಸಿ ನಾಯಕಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ. ಅಧಿಕಾರಿ ಕಳೆದ ತಿಂಗಳಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.