ಭಾನುವಾರ, ಆಗಸ್ಟ್ 14, 2022
28 °C

ಶಾಸಕ ಸ್ಥಾನದಿಂದ ಮುಕುಲ್ ರಾಯ್ ಅನರ್ಹಗೊಳಿಸಲು ಮನವಿ: ಸ್ಪೀಕರ್‌ಗೆ ಸುವೇಂದು ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಬಿಜೆಪಿ ತೊರೆದು ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಮುಕುಲ್‌ ರಾಯ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಸ್ಪೀಕರ್‌ಗೆ ಶುಕ್ರವಾರ ಅರ್ಜಿ ಸಲ್ಲಿಸಿದರು.

‘ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿ, ಮುಕುಲ್‌ ರಾಯ್‌ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಅವರು ಟಿಎಂಸಿಗೆ ಸೇರ್ಪಡೆಯಾಗಿದ್ದು, ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಈಗ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸ್ಪೀಕರ್‌ ಅವರಿಗೆ ಅರ್ಜಿ ಸಲ್ಲಿಸಲಾಗಿದೆ’ ಎಂದು ಬಿಜೆಪಿ ಶಾಸಕ ಮನೋಜ್‌ ಟಿಗ್ಗಾ ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್ ಬಿಮನ್‌ ಬ್ಯಾನರ್ಜಿ, ‘ನಾನು ವಿಧಾನಸಭೆಗೆ ಇನ್ನೂ ಭೇಟಿ ನೀಡಿ, ಅರ್ಜಿಯನ್ನು ಪರಿಶೀಲಿಸಿಲ್ಲ. ಹೀಗಾಗಿ ಈ ಕುರಿತು ಏನೂ ಹೇಳುವುದಿಲ್ಲ’ ಎಂದರು.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ಮುಖಂಡರು, ‘ವಿಧಾನಸಭೆ ಚುನಾವಣೆಗೂ ಮುನ್ನ ಸುವೇಂದು ಅವರ ತಂದೆ ಶಿಶಿರ್‌ ಅಧಿಕಾರಿ ಅವರು ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಂಸದ ಸ್ಥಾನಕ್ಕೆ ಮೊದಲು ರಾಜೀನಾಮೆ ನೀಡಿ, ಮೇಲ್ಪಂಕ್ತಿ ಹಾಕುವಂತೆ ಸುವೇಂದು ಅಧಿಕಾರಿ ತಮ್ಮ ತಂದೆಯವರಿಗೆ ಮನವಿ ಮಾಡಲಿ’ ಎಂದು ತಿರುಗೇಟು ನೀಡಿದ್ದಾರೆ.

ಮುಕುಲ್‌ ರಾಯ್ ಅವರು ಕೃಷ್ಣಾನಗರ (ಉತ್ತರ) ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು