ಶನಿವಾರ, ನವೆಂಬರ್ 26, 2022
23 °C

ಕೇಂದ್ರದ ಹಣವನ್ನು ಬೇರೆಡೆ ವಿನಿಯೋಗಿಸುತ್ತಿರುವ ಮಮತಾ ಸರ್ಕಾರ: ಸುವೇಂದು ಅಧಿಕಾರಿ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನವನ್ನು ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರವು ವಿವಿಧ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಗುರುವಾರ (ಸೆ.29) ಪತ್ರ ಬರೆದಿದ್ದಾರೆ.

ಸಾರ್ವಜನಿಕ ಹಣಕಾಸು ನಿರ್ವಹಣಾ ಇಲಾಖೆಗೆ ಅನುದಾನದ ವಿವರ ನೀಡುವ ಮುನ್ನ, ರಾಜ್ಯ ಸರ್ಕಾರವು ಎಲ್ಲಾ ಕೇಂದ್ರದ ಹಣವನ್ನು ವೇತನ ಮತ್ತು ಸಂಚಿತ ನಿಧಿ ಮುಖ್ಯಸ್ಥರಿಗೆ ರವಾನಿಸಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

'ನಿರ್ಧಿಷ್ಟ ವಿಭಾಗಗಳ ಮುಖ್ಯಸ್ಥರ ವಹಿವಾಟಿನ ಬಗ್ಗೆ ಕೂಲಂಕಷವಾಗಿ ನಡೆಸಬೇಕು. ರಾಜ್ಯ ಸರ್ಕಾರದ ಅಧಿಕಾರಿಗಳ ಪ್ರಭಾವಕ್ಕೆ ಒಳಗಾಗದವರಿಂದ ತನಿಖೆ ನಡೆಯಬೇಕು' ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್‌ನಲ್ಲಿ ಖಾತೆ ತೆರೆಯಬೇಕು ಎಂಬ ರಾಜ್ಯ ಹಣಕಾಸು ಕಾರ್ಯದರ್ಶಿ ಮನೋಜ್‌ ಪಂತ್‌ ಅವರ ಆದ್ಯತೆಯನ್ನು ಸರ್ಕಾರವು ಕಡೆಗಣಿಸಿದೆ. ಸಾರ್ವಜನಿಕ ಹಣಕಾಸು ನಿರ್ವಹಣೆಯ ರಾಜ್ಯ ನೋಡಲ್ ಖಾತೆಯನ್ನು ಐಸಿಐಸಿಐ ಬ್ಯಾಂಕ್‌ನಲ್ಲಿ ತೆರೆದಿದೆ ಎಂದೂ ದೂರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು