ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವದೇಶಿ ಅಂದರೆ ಎಲ್ಲ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿಸುವುದು ಅಲ್ಲ: ಭಾಗವತ್

Last Updated 13 ಆಗಸ್ಟ್ 2020, 6:23 IST
ಅಕ್ಷರ ಗಾತ್ರ

ನವದೆಹಲಿ: ಸ್ವದೇಶಿ ಅಂದರೆ ಎಲ್ಲ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿಸುವುದು ಎಂಬ ಅರ್ಥವಲ್ಲ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಅದೇ ವೇಳೆ ದೇಶದಲ್ಲಿ ಸಾಂಪ್ರದಾಯಿಕವಾಗಿ ಕೊರತೆಯಿರುವ, ಸ್ಥಳೀಯವಾಗಿ ಲಭ್ಯವಿಲ್ಲದ ತಂತ್ರಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಕೋವಿಡ್ -19 ರ ಹಿನ್ನೆಲೆಯಲ್ಲಿ ಸ್ವಾವಲಂಬಿ ಮತ್ತು ಸ್ವದೇಶಿ ಉತ್ಪನ್ನಗಳ ಪ್ರಸ್ತುತತೆಯ ಬಗ್ಗೆ ಮಾತನಾಡಿದ ಅವರು, ಜಾಗತೀಕರಣವು ಅಪೇಕ್ಷಿತ ಫಲಿತಾಂಶವನ್ನು ನೀಡಿಲ್ಲ ಮತ್ತು ಎಲ್ಲೆಡೆ ಒಂದು ಆರ್ಥಿಕ ಮಾದರಿಯನ್ನು ಅನ್ವಯಿಸಲಾಗುವುದಿಲ್ಲ ಎಂದಿದ್ದಾರೆ.

ಬುಧವಾರ ವರ್ಚುವಲ್ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಸ್ವಾವಲಂಬಿ ರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಬೇಕಿದೆ. ಕೋವಿಡ್ 19 ನಂತರದ ಜಗತ್ತಿಗೆ ಜಗತ್ತನ್ನು ಒಂದು ಮಾರುಕಟ್ಟೆ ಎಂದಲ್ಲ ಒಂದು ಕುಟುಂಬ ಒಂದು ಪರಿಗಣಿಸುವ ಆರ್ಥಿಕ ಮಾದರಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಸ್ವಾವಲಂಬಿ ಭಾರತದ ನಿರ್ಧಾರಕ್ಕೆ ಬೆಂಬಲ ನೀಡಿದ ಆರ್‌ಎಸ್‌ಎಸ್ ಮುಖ್ಯಸ್ಥ, ಸ್ವದೇಶಿ ಎಂದರೆ ಸ್ಥಳೀಯ ಉತ್ಪನ್ನಗಳು, ತಂತ್ರಜ್ಞಾನಗಳಿಗೆ ಉತ್ತೇಜನ ನೀಡುವುದು ಮತ್ತು ಆದ್ಯತೆ ನೀಡುವುದು. ಹಾಗಂತ ಎಲ್ಲಾ ವಿದೇಶಿ ವಸ್ತುಗಳನ್ನು ಬಹಿಷ್ಕರಿಸಬೇಕಾಗಿಲ್ಲ.

ಸ್ಥಳೀಯವಾಗಿ ಲಭ್ಯವಿಲ್ಲದ ವಸ್ತುಗಳು ಅಥವಾ ತಂತ್ರಜ್ಞಾನವನ್ನು ಮಾತ್ರ ಆಮದು ಮಾಡಿಕೊಳ್ಳಲೇಬೇಕು ಮತ್ತು ಈ ವಸ್ತುಗಳನ್ನು ನಾವು ಭಾರತಕ್ಕೆ ಒಪ್ಪುವ ರೀತಿಯಲ್ಲಿ ಬದಲಾವಣೆ ಮಾಡಬೇಕು. ಆಮದು ಮಾಡಿಕೊಂಡ ವಸ್ತುಗಳ ಮುಂದೆ ಸಾಂಪ್ರದಾಯಿಕವಾಗಿ ಲಭ್ಯವಿರುವ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ಕಡೆಗಣಿಸುವ ಕೆಲವು ಉದಾಹರಣೆಗಳನ್ನು ನೀಡಿದ ಅವರು, ದೇಶೀಯ ವಸ್ತುಗಳನ್ನು ಕೀಳಾಗಿ ಕಾಣುವ ಮನಸ್ಥಿತಿ ಬದಲಾಗಬೇಕು ಎಂದಿದ್ದಾರೆ.

ಸ್ವಾತಂತ್ರ್ಯದ ನಂತರವೂ ಭಾರತದಲ್ಲಿ ನೀತಿ ನಿರೂಪಣೆ ಪಶ್ಚಿಮ ಮತ್ತು ಇತರ ವಿದೇಶಗಳಿಂದ ಪ್ರಭಾವಿತವಾಗಿದೆ ಇದರಿಂದಾಗಿ ಸ್ಥಳೀಯವಾಗಿ ಲಭ್ಯವಿರುವ ಅನೇಕ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ವಿದೇಶಿ ವಸ್ತುಗಳ ಪರವಾಗಿ ಕಡೆಗಣಿಸಲಾಗಿದೆ ಎಂದು ಹೇಳಿದರು.

ಭಾರತವನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆ ಎಂದು ಇತ್ತೀಚೆಗೆ ಘೋಷಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿವರಿಸಿದ ಅವರು, ಇಂತಹ ನೀತಿಗಳು ತನ್ನ ಜನರ ಸಾಮರ್ಥ್ಯವನ್ನು ಮತ್ತು ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಅರಿತುಕೊಳ್ಳಲು ಭಾರತಕ್ಕೆ ಸಹಾಯ ಮಾಡುತ್ತದೆ.

ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವ ಮತ್ತು ವಿದೇಶಿ ಹೂಡಿಕೆ ಮತ್ತು ವಸ್ತುಗಳ ಒಳಹರಿವನ್ನು ನಿರ್ಬಂಧಿಸುವ ಬಗ್ಗೆ ಪ್ರತಿಪಾದಿಸುವ ಸ್ವದೇಶಿ ಪರಿಕಲ್ಪನೆಯು ಆರ್‌ಎಸ್‌ಎಸ್ ಸಿದ್ಧಾಂತದಲ್ಲಿ ಪ್ರಮುಖವಾಗಿ ಕಂಡುಬರುತ್ತದೆ. ಇದರ ಅಂಗಸಂಸ್ಥೆ ಸ್ವದೇಶಿ ಜಾಗರಣ್ ಮಂಚ್ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಅಭಿಯಾನದಲ್ಲಿ ಮುಂಚೂಣಿಯಲ್ಲಿದೆ ಎಂದು ಭಾಗವತ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT