ಶುಕ್ರವಾರ, ಮಾರ್ಚ್ 31, 2023
22 °C

Swami Vivekananda Jayanti 2023: ವಿವೇಕಾನಂದ ಸ್ಮರಿಸಿದ ಮಲ್ಲಿಕಾರ್ಜುನ ಖರ್ಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವೆದಹಲಿ: ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೌರವ ಸಮರ್ಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಿವೇಕಾನಂದರ ಆದರ್ಶಗಳು ಮತ್ತು ವಿಚಾರಗಳು ದೇಶದ ಜನತೆಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ ಎಂದು ಹೇಳಿದರು. 

ವಿವೇಕಾನಂದರ ಜೀವನ, ದೇಶಭಕ್ತಿ, ಆಧ್ಮಾತ್ಮಿಕತೆ ಮತ್ತು ಸಮರ್ಪಣೆ ಯಾವಾಗಲೂ ಸ್ಫೂರ್ತಿ ನೀಡುತ್ತವೆ ಎಂದು ಪ್ರಧಾನಿ ಮೋದಿ ಸ್ಮರಿಸಿದರು.

 

 

 

ಭಾರತ್ ಜೋಡೊ ಯಾತ್ರೆಯನ್ನು ಉಲ್ಲೇಖ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸ್ವಾಮಿ ವಿವೇಕಾನಂದರು ದೇಶವನ್ನು ಒಗ್ಗೂಡಿಸುವ ವಾಸ್ತವಿಕ ಮೌಲ್ಯದಲ್ಲಿ ನಂಬಿಕೆಯನ್ನಿರಿಸಿದ್ದರು ಎಂದು ಹೇಳಿದರು.

 

 

 

 

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಇಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು