ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1893ರ ಸ್ವಾಮಿ ವಿವೇಕಾನಂದರ ಶಿಕಾಗೊ ಭಾಷಣವನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ

Last Updated 11 ಸೆಪ್ಟೆಂಬರ್ 2021, 6:22 IST
ಅಕ್ಷರ ಗಾತ್ರ

ನವದೆಹಲಿ: 1893 ರಲ್ಲಿ ಅಮೆರಿಕದ ಶಿಕಾಗೊದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ ಪ್ರಸಿದ್ಧ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಸ್ಮರಿಸಿದ್ದಾರೆ. ಸಮೃದ್ಧ, ನ್ಯಾಯನಿಷ್ಠ ಹಾಗೂ ಬಹುಸಂಸ್ಕೃತಿಯನ್ನು ಒಳಗೊಂಡಿರುವ ಜಗತ್ತನ್ನು ಸೃಷ್ಟಿಸುವ ಸಾಮರ್ಥ್ಯವನ್ನು ವಿವೇಕಾನಂದರ ಶಿಕಾಗೊ ಭಾಷಣ ಹೊಂದಿದೆ ಎಂದು ಮೋದಿ ಹೇಳಿದ್ದಾರೆ.

ವಿವೇಕಾನಂದರ ಭಾಷಣವು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಸುದೀರ್ಘವಾಗಿ ಸಾರಿದೆ. ಇದರಿಂದಾಗಿಯೇ ಭಾಷಣವು ಎಲ್ಲರಿಂದಲೂ ಪ್ರಶಂಸೆಗೆ ಪಾತ್ರವಾಯಿತು. ಅವರ ಭಾಷಣವೂ ಈಗಲೂ ಪ್ರತಿಧ್ವನಿಸುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, 'ಸ್ವಾಮಿ ವಿವೇಕಾನಂದರ 1893ರ ಚಿಕಾಗೋ ಭಾಷಣವು ಭಾರತೀಯ ಸಂಸ್ಕೃತಿಯ ಉತ್ಕೃಷ್ಟತೆಯನ್ನು ಸುಂದರವಾಗಿ ಪ್ರದರ್ಶಿಸಿತ್ತು. ಅವರ ಭಾಷಣವು ಸಮೃದ್ಧ, ನ್ಯಾಯನಿಷ್ಠ ಹಾಗೂ ಬಹುಸಂಸ್ಕೃತಿಯನ್ನು ಒಳಗೊಂಡಿರುವ ಜಗತ್ತನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT