ಮಂಗಳವಾರ, ಅಕ್ಟೋಬರ್ 27, 2020
18 °C

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್‌ಗೆ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಕೊಚ್ಚಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ಇಡೀ ದೇಶವೇ ತಿರುಗಿನೋಡುವಂತೆ ಮಾಡಿದ್ದ ಕೇರಳ ಚಿನ್ನ ಸಾಗಣೆ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.

ಅದರೆ, ಸ್ವಪ್ನಾ ಸುರೇಶ್‌ ಭಯೋತ್ಪಾದಕ ಸಂಪರ್ಕಗಳ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರ ಜೈಲುವಾಸ ಮುಂದುವರಿದೆ. 

ಕನಿಷ್ಟ 10 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಈ ಅಪರಾಧ ಪ್ರಕರಣದಲ್ಲಿ ಅ.5ರ ವೇಳೆಗೆ ಸ್ವ‍ಪ‍್ನ ಸುರೇಶ್‌ರನ್ನು 60 ದಿನಗಳಿಗಿಂತಲೂ ಹೆಚ್ಚು ದಿನ ಕಸ್ಟಡಿಯಲ್ಲಿ ಇಡಲಾಗಿತ್ತು. 60 ದಿನಗಳ ಈ ಅವಧಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸಿಆರ್‌ಪಿಸಿ ಸೆಕ್ಷನ್ 167 (2) ಅಡಿಯಲ್ಲಿ ಸ್ವಪ್ನಾ ಸುರೇಶ್‌ ಜಾಮೀನು ಪಡೆಯಲು ಅರ್ಹವಾಗಿದ್ದಾರೆ ಎಂದು ನ್ಯಾಯಾಲಯ ಹೇಳಿತು.

ಜುಲೈ 5 ರಂದು ದುಬೈನಿಂದ ಬಂದಿದ್ದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಲ್ಲಿ 30 ಕೆಜಿ ಚಿನ್ನವನ್ನು ಗುಪ್ತವಾಗಿ ಸಾಗಿಸಲಾಗುತ್ತಿತ್ತು. ಇದನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆಹಚ್ಚಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು