ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಸ್ವರಾ ಭಾಸ್ಕರ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕಾಂಗ್ರೆಸ್ ಯಾತ್ರೆಯಲ್ಲಿ ಭಾಗಿ
Last Updated 1 ಡಿಸೆಂಬರ್ 2022, 6:08 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪಾಲ್ಗೊಂಡಿದ್ದಾರೆ.

ಮಧ್ಯಪ್ರದೇಶದ ಉಜೈನಿ ಮೂಲಕ ಯಾತ್ರೆ ಸಾಗುತ್ತಿದೆ. ಯಾತ್ರೆಯಲ್ಲಿ ಗುರುವಾರ ನಟಿ ಸ್ವರಾ, ರಾಹುಲ್ ಜತೆ ಹೆಜ್ಜೆ ಹಾಕಿದ್ದಾರೆ.

150 ದಿನಗಳ ಭಾರತ್ ಜೋಡೊ ಯಾತ್ರೆಯ 83ನೇ ದಿನವಾದ ಇಂದು ಕೂಡ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಜತೆ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ 12 ರಾಜ್ಯಗಳ ಮೂಲಕ ಹಾದುಹೋಗಲಿದ್ದು, 3570 ಕಿ.ಮೀ. ದೂರ ಕ್ರಮಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT