ಮುಂಬೈ: ಇಂಡಿಗೊ ವಿಮಾನದ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸ್ವೀಡನ್ ಪ್ರಜೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಘಟನೆಯು, ಬ್ಯಾಂಕಾಕ್‌ನಿಂದ ಮುಂಬೈಗೆ ಬಂದ ವಿಮಾನದಲ್ಲಿ (6ಇ–1052) ಗುರುವಾರ ನಡೆದಿದೆ. ಕ್ಲಾಸ್ ಎರಿಕ್ ಹರಾಲ್ಡ್ ಜೋನಸ್ ವೆಸ್ಟ್‌ಬರ್ಗ್ ಬಂಧಿತ ಆರೋಪಿ ಎಂದು ಸಹಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
‘ಪ್ರಯಾಣದ ವೇಳೆ, ಆರೋಪಿಯು ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಆಹಾರವನ್ನು ಖರೀದಿಸುವ ಸಂದರ್ಭದಲ್ಲಿ ವಿಮಾನದ ಸಿಬ್ಬಂದಿಯೊಬ್ಬರನ್ನು ಅನುಚಿತ ರೀತಿ ಸ್ಪರ್ಶಿಸಿದ್ದರು. ಈ ನಡೆಯನ್ನು ಆಕ್ಷೇಪಿಸಿದ್ದ ಸಹಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ವಿಮಾನ ಇಲ್ಲಿಗೆ ಬಂದಿಳಿದ ತಕ್ಷಣವೇ ಆರೋಪಿಯನ್ನು ಬಂಧಿಸಿ, ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಶುಕ್ರವಾರ ಹಾಜರುಪಡಿಸಲಾಯಿತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು’ ಎಂದು ತಿಳಿಸಿದ್ದಾರೆ.
ವೆಸ್ಟ್‌ಬರ್ಗ್ ಅವರು, ವಿಮಾನದಲ್ಲಿ ತೋರಿದ ಅಶಿಸ್ತಿನ ವರ್ತನೆ ಆರೋಪದಡಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಭಾರತದಲ್ಲಿ ಬಂಧಿಸಲಾದ ಎಂಟನೇ ವ್ಯಕ್ತಿ ಎಂದು ಮೂಲಗಳು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.