ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲೀಗ್‌ ಜಮಾತ್‌:ಹೈಕೋರ್ಟ್ ಆದೇಶ ರದ್ದುಗೊಳಿಸಿದ ‘ಸುಪ್ರೀಂ’

Last Updated 19 ನವೆಂಬರ್ 2020, 20:45 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ –19 ಹರಡುತ್ತಿದ್ದ ಸಂದರ್ಭದಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕಜ್‌ನಲ್ಲಿ ನಡೆದ ತಬ್ಲೀಗ್‌ ಜಮಾತ್‌ನ ಸಭೆಯಲ್ಲಿ ಪಾಲ್ಗೊಂಡಿದ್ದ ಒಂಬತ್ತು ಮಂದಿ ವಿದೇಶಿಯರಿಗೆ, 10 ವರ್ಷ ಭಾರತಕ್ಕೆ ಭೇಟಿ ನೀಡದಂತೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌. ಅಬ್ದುಲ್‌ ನಜೀರ್‌ ಮತ್ತು ಸಂಜೀವ್‌ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು, ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ಹಾಗೂ ಇತರ ಎಂಟು ಮಂದಿ ಭವಿಷ್ಯದಲ್ಲಿ ಭಾರತಕ್ಕೆ ಭೇಟಿ ನೀಡುವ ಸಲುವಾಗಿ ವೀಸಾಕ್ಕೆ ಅರ್ಜಿ ಸಲ್ಲಿಸಿದರೆ, ಹೈಕೋರ್ಟ್‌ನ ಆದೇಶದ ಪ್ರಭಾವಕ್ಕೆ ಒಳಗಾಗದೆ ಅರ್ಹತೆಯ ಆಧಾರದಲ್ಲಿ ಅವರ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT