ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಆರೋಗ್ಯದ ಕಾಳಜಿ ನೀವೇ ವಹಿಸಿ; ಸರ್ಕಾರ ಮಾರಾಟದಲ್ಲಿ ನಿರತವಾಗಿದೆ–ರಾಹುಲ್

Last Updated 26 ಆಗಸ್ಟ್ 2021, 8:30 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕಳವಳ ವ್ಯಕ್ತಪಡಿಸಿದ್ದು, ‘ನಿಮ್ಮ ಆರೋಗ್ಯದ ಬಗ್ಗೆ ನೀವೇ ಕಾಳಜಿ ವಹಿಸಬೇಕು. ಸರ್ಕಾರ ಮಾರಾಟದಲ್ಲಿ ನಿರತವಾಗಿದೆ’ ಎಂದು ಗುರುವಾರ ಟೀಕಿಸಿದ್ದಾರೆ.

ಇತ್ತೀಚಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, ‘ಕಳೆದ 70 ವರ್ಷಗಳಲ್ಲಿ ಕಟ್ಟಲಾದ ದೇಶದ ಆಸ್ತಿಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ’ ಎಂದು ದೂರಿದ್ದಾರೆ.

‘ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ಸಂಖ್ಯೆಯು ಆತಂಕ ಮೂಡಿಸಿದೆ. ಮುಂದಿನ ಅಲೆಯಿಂದ ಭೀಕರ ಪರಿಣಾಮಗಳು ಉಂಟಾಗಬಹುದು. ಅವುಗಳಿಂದ ದೂರವಿರಬೇಕಾದರೆ ಲಸಿಕೆ ಅಭಿಯಾನವನ್ನು ಇನ್ನಷ್ಟು ತ್ವರಿತಗಿಳಿಸಬೇಕು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT