ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ತಡೆಗೆ ರಚನಾತ್ಮಕ ಕ್ರಮ ಕೈಗೊಳ್ಳುವಂತೆ ಯುಪಿ ಸರ್ಕಾರಕ್ಕೆ ಪ್ರಿಯಾಂಕಾ ಮನವಿ

Last Updated 15 ಏಪ್ರಿಲ್ 2021, 11:53 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚನಾತ್ಮಕ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ‘ಇದು ಎಚ್ಚರಿಕೆಯ ಗಂಟೆಯಾಗಿದೆ. ಕೋವಿಡ್‌ ತಡೆಗಟ್ಟಿ ಜನರ ಜೀವ ಉಳಿಸಲು ಮತ್ತು ಸೋಂಕು ಹರಡುವಿಕೆಯನ್ನು ತಡೆಯಲು ರಚನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಸಮಯ ಇದಾಗಿದೆ’ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ಬುಧವಾರ ಕಾಂಗ್ರೆಸ್‌ ಆರೋಪಿಸಿದ್ದು, ರಾಜ್ಯ ಸರ್ಕಾರ ಆರಂಭದಿಂದಲ್ಲೂ ಎಚ್ಚರಿಕೆ ವಹಿಸಿದ್ದರೆ ಕೋವಿಡ್‌ ಹರಡುವಿಕೆಯನ್ನು ತಡೆಯಬಹುದಿತ್ತು ಎಂದು ವಾದಿಸಿತ್ತು.

ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ 12ನೇ ತರಗತಿ ವರೆಗಿನ ಎಲ್ಲ ಶಾಲೆಗಳನ್ನು ಮೇ 15ರವರೆಗೆ ಮುಚ್ಚುವಂತೆ ಹಾಗೂ 10 ಮತ್ತು 12ನೇ ತರಗತಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮೇ 20ಕ್ಕೆ ಮುಂದೂಡಿ ಸರ್ಕಾರ ಗುರುವಾರ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT