ಶುಕ್ರವಾರ, ಮಾರ್ಚ್ 5, 2021
30 °C

ಮುಕ್ತ, ನ್ಯಾಯಸಮ್ಮತ ಚುನಾವಣೆ ಪ್ರತಿಜ್ಞೆ ಸ್ವೀಕರಿಸಲು ರಾಜ್ಯಪಾಲರ ಸಲಹೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ: ‘ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತು ಗಣರಾಜ್ಯೋತ್ಸವ ದಿನದಂದು ಪ್ರತಿಜ್ಞೆ ಸ್ವೀಕರಿಸಬೇಕು’ ಎಂದು ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಪಶ್ಚಿಮ ಬಂಗಾಳದ ಜನತೆಗೆ ಸಲಹೆ ಮಾಡಿದ್ದಾರೆ. ರಾಜ್ಯ ವಿಧಾನಸಭೆಗೆ ಏಪ್ರಿಲ್–ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯು ಬೆಳಗಿದಾಗ ಮಾತ್ರವೇ ರಾಜ್ಯದ ಅಭಿವೃದ್ಧಿಯೂ ಸಾಧ್ಯ. ಇದಕ್ಕಾಗಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಅಗತ್ಯ. ಹೀಗಾಗಿ, ಮುಕ್ತ ಚುನಾವಣೆಯ ಪ್ರತಿಜ್ಞೆ ಸ್ವೀಕರಿಸಿ ಹಿಂಸೆಯನ್ನು ಹತ್ತಿಕ್ಕೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ

ಟ್ವೀಟ್‌ನ ಲಿಂಕ್‌ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ಖಾತೆ, ರಾಜ್ಯ ಗೃಹ ಇಲಾಖೆಯ ಅಧಿಕೃತ ಖಾತೆ ಮತ್ತು ಪಶ್ಚಿಮ ಬಂಗಾಳ ಪೊಲೀಸ್‌ ಇಲಾಖೆಯ   ಅಧಿಕೃತ ಟ್ವಿಟರ್ ಖಾತೆಯ ಜೊತೆಗೆ ಹಂಚಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು