ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಉಕ್ರೇನ್‌ನಲ್ಲಿ ಸಿಲುಕಿದವರ ಕರೆತರಲು ಸಿಎಂ ಸ್ಟಾಲಿನ್‌ ಮನವಿ

Last Updated 24 ಫೆಬ್ರುವರಿ 2022, 14:16 IST
ಅಕ್ಷರ ಗಾತ್ರ

ಚೆನ್ನೈ: ‘ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಅಂದಾಜು 5,000 ವಿದ್ಯಾರ್ಥಿಗಳು ಸೇರಿದಂತೆ ತಮಿಳುನಾಡು ಮೂಲದವರನ್ನು ತಕ್ಷಣವೇ ವಾಪಸ್‌ ಕರೆ ತರಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರನ್ನು ಗುರುವಾರ ಒತ್ತಾಯಿಸಿದ್ದಾರೆ.

‘ಈಗಾಗಲೇ ತಮಿಳುನಾಡು ಸರ್ಕಾರ ಸಹಾಯವಾಣಿ ಆರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುವ ಮೂಲಕ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಸ್ಥಳಾಂತರಿಸಲು ಅನುಕೂಲವಾಗುವಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ’ ಎಂದು ಸ್ಟಾಲಿನ್‌ಅವರು ಜೈಶಂಕರ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರಿಂದ ನಮಗೆ ಹಲವು ಕರೆಗಳು ಬರುತ್ತಿವೆ. ತಮ್ಮ ಮಕ್ಕಳನ್ನು ಈ ಕೂಡಲೇ ಅಲ್ಲಿಂದ ಕರೆತರುವಂತೆ ಅವರು ಕೋರಿದ್ದಾರೆ. ಆದರೆ, ಉಕ್ರೇನ್‌ನ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿವೆ. ಮಕ್ಕಳನ್ನು ಭಾರತಕ್ಕೆ ವಾಪಸ್‌ ಕರೆತರಲು ಅವರಿಗೆ ನಮ್ಮ ನೆರವು ಬೇಕಾಗಿದೆ. ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ವಂದೇ ಭಾರತ್‌ ಮಿಷನ್‌ನಂತಹ ವಿಶೇಷ ವಿಮಾನಗಳನ್ನು ಆರಂಭಿಸುವಂತೆ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT