ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ರಾ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ರಾಹುಲ್‌ ಗಾಂಧಿ ಆಗ್ರಹ

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ; 22 ರೋಗಿಗಳ ಸಾವು ವರದಿ
Last Updated 8 ಜೂನ್ 2021, 8:36 IST
ಅಕ್ಷರ ಗಾತ್ರ

ನವದೆಹಲಿ: ಆಗ್ರಾದ ಆಸ್ಪತ್ರೆಯೊಂದರಲ್ಲಿ ಆಮ್ಲಜನಕ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ 22 ಜನ ರೋಗಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಆಗ್ರಹಿಸಿದರು.

‘ಅಣಕು ಪ್ರದರ್ಶನದ ಭಾಗವಾಗಿ ಆಮ್ಲಜನಕ ಪೂರೈಕೆಯನ್ನು 5 ನಿಮಿಷಗಳ ಕಾಲ ಸ್ಥಗಿತಗೊಳಿಸಿದ್ದೆ. ಈ ಕಾರಣದಿಂದ 22 ಜನ ರೋಗಿಗಳು ಮೃತಪಟ್ಟರು’ ಎಂಬುದಾಗಿ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಮಾತನಾಡಿದ್ದು ಎನ್ನಲಾದ ವಿಡಿಯೊ ವೈರಲ್‌ ಆಗಿದೆ. ಈ ವಿಡಿಯೊ ಕುರಿತ ವರದಿಯನ್ನು ಉಲ್ಲೇಖಿಸಿ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

‘ಬಿಜೆಪಿಯ ಆಡಳಿತದಲ್ಲಿ ಆಮ್ಲಜನಕ ಹಾಗೂ ಮಾನವೀಯತೆಯ ಭಾರಿ ಕೊರತೆ ಇದೆ. ರೋಗಿಗಳು ಮೃತಪಟ್ಟಿರುವ ಘೋರ ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಮೃತರ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳುವೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ, ವೈದ್ಯರು ಮಾತನಾಡಿದ್ದಾರೆ ಎನ್ನಲಾದ ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 22 ಜನ ರೋಗಿಗಳ ಸಾವಿಗೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT