ಗುರುವಾರ , ಮೇ 13, 2021
22 °C
ಕೇಂದ್ರ ಸರ್ಕಾರಕ್ಕೆ ಶಿವಸೇನಾ ಒತ್ತಾಯ

10, 12ನೇ ತರಗತಿ‌ ಪರೀಕ್ಷೆ ಕುರಿತು ಏಕರೂಪದ ನಿರ್ಧಾರ ಕೈಗೊಳ್ಳಿ: ಶಿವಸೇನಾ ನಾಯಕ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಬಗ್ಗೆ ಏಕರೂಪದ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಶಿವಸೇನಾ ಒತ್ತಾಯಿಸಿದೆ.

ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅವರಿಗೆ ಶಿವಸೇನಾ ಮುಖ್ಯ ವಕ್ತಾರ ಅರವಿಂದ್‌ ಸಾವಂತ್‌ ಅವರು ಏಪ್ರಿಲ್‌ 10ರಂದು ‍ಪತ್ರ ಬರೆದಿದ್ದಾರೆ.

‘ಯಾವುದೇ ರಾಜ್ಯದ ಏಕಪಕ್ಷೀಯ ನಿರ್ಧಾರವು ಆ ರಾಜ್ಯದ ವಿದ್ಯಾರ್ಥಿಗಳಿಗೆ ವೃತ್ತಿ ಮತ್ತು ಅವಕಾಶಗಳ ವಿಷಯದಲ್ಲಿ ತೊಂದರೆಗೆ ಕಾರಣವಾಗಬಹುದು. ಹಾಗಾಗಿ ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಕು’ ಎಂದು ಶಿವಸೇನಾ ಪತ್ರದಲ್ಲಿ ಮನವಿ ಮಾಡಿದೆ.

‘ಸುರಕ್ಷತಾ ಕ್ರಮಗಳು ಮತ್ತು ಅವಕಾಶಗಳ ವಿಷಯದಲ್ಲಿ ದೇಶದ ಯಾವುದೇ ರಾಜ್ಯದ ವಿದ್ಯಾರ್ಥಿಗಳಿಗೆ ತಾರತಮ್ಯ ಆಗಬಾರದು. ಭಾರತದಲ್ಲಿ ಸಿಬಿಎಸ್‌ಇ, ಐಸಿಎಸ್‌ಇ, ಸ್ಟೇಟ್‌ ಬೋರ್ಡ್‌ ಸೇರಿದಂತೆ ಹಲವು ಶಿಕ್ಷಣ ಮಂಡಳಿಗಳಿವೆ. ಮಾನವ ಸಂಪನ್ಮೂಲ ಇಲಾಖೆಯಿಂದ(ಶಿಕ್ಷಣ) ಪರೀಕ್ಷೆಯ ಕುರಿತಾಗಿ ಸ್ಪಷ್ಟ ಸಂವಹನದ ಅವಶ್ಯಕತೆಯಿದೆ. ಹಾಗಾಗಿ ಕೇಂದ್ರ ಸರ್ಕಾರವು ದೇಶದಾದ್ಯಂತ 10 ಮತ್ತು 12ನೇ ತರಗತಿಗಳ ಬೋರ್ಡ್‌ ಪರೀಕ್ಷೆಯ ಬಗ್ಗೆ ಏಕರೂಪದ ನಿರ್ಧಾರ ಕೈಗೊಳ್ಳಬೇಕು’ ಎಂದು ಅವರು ಹೇಳಿದರು.

‘ಹಲವು ವಿದ್ಯಾರ್ಥಿಗಳು ಏಪ್ರಿಲ್‌–ಮೇ ತಿಂಗಳಲ್ಲಿ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಭಾಗಿಯಾಗಲಿದ್ದಾರೆ. ಈ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗುತ್ತಿಲ್ಲ. ಹೀಗಿರುವಾಗ ಪರೀಕ್ಷೆ ನಡೆಸುವ ಮೂಲಕ ಹಲವು ವಿದ್ಯಾರ್ಥಿಗಳು, ಕುಟುಂಬಗಳು, ಶಿಕ್ಷಕರನ್ನು ಅಪಾಯಕ್ಕೆ ದೂಡುತ್ತಿದ್ದೇವೆ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು