ಮಂಗಳವಾರ, ಮೇ 18, 2021
30 °C

ಕೋವಿಡ್‌ ಹೆಚ್ಚಳ: ಅಗತ್ಯ ವಿಷಯಗಳನ್ನು ಮಾತ್ರ ಕೈಗೆತ್ತಿಕೊಳ್ಳಿ –ದೆಹಲಿ ಹೈಕೋರ್ಟ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಅಗತ್ಯವಿರುವ ವಿಷಯಗಳನ್ನು ಮಾತ್ರ ಕೈಗೆತ್ತಿಕೊಳ್ಳಿ’ ಎಂದು ದೆಹಲಿ ಹೈಕೋರ್ಟ್‌, ಜಿಲ್ಲಾ ನ್ಯಾಯಾಲಯಗಳಿಗೆ ಸೂಚಿಸಿದೆ.

ದೆಹಲಿಯಲ್ಲಿ ಭಾನುವಾರ 25,462 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಏಪ್ರಿಲ್‌ 19 ರಿಂದ ಈ ವರ್ಷ ಸಲ್ಲಿಸಲಾದ ಅತಿಅವಶ್ಯಕ ಅರ್ಜಿಗಳನ್ನು ಮಾತ್ರ ವಿಚಾರಣೆ ನಡೆಸುವುದಾಗಿ ದೆಹಲಿ ಹೈಕೋರ್ಟ್‌ ಹೇಳಿತ್ತು. ಇದರ ಬೆನ್ನಲ್ಲೇ ಜಿಲ್ಲಾ ನ್ಯಾಯಾಲಯಕ್ಕೂ ಅವಶ್ಯಕ ಅರ್ಜಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಸುವಂತೆ ಸೂಚಿಸಿದೆ.

‘ದೆಹಲಿ ನ್ಯಾಯಾಲಯಗಳಲ್ಲಿ ಪಟ್ಟಿ ಮಾಡಲಾದ ಇತರೆ ಎಲ್ಲಾ ಪ್ರಕರಣಗಳನ್ನು ಸಂಬಂಧಪ‍ಟ್ಟ ನ್ಯಾಯಾಲಗಳು ಮುಂದೂಡಬೇಕು. ಈ ಬಗ್ಗೆ ದೆಹಲಿ ನ್ಯಾಯಾಲಯದ ವೆಬ್‌ಸೈಟ್‌ಗಳಲ್ಲಿ ತಿಳಿಸಬೇಕು’ ಎಂದು ಆದೇಶದಲ್ಲಿ ಹೇಳಲಾಗಿದೆ.

ಏಪ್ರಿಲ್‌ 9ರಿಂದ ಏಪ್ರಿಲ್‌ 23ರ ತನಕ ಪ್ರಕರಣಗಳ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾಡುವುದಾಗಿ ದೆಹಲಿ ಹೈಕೋರ್ಟ್‌ ನಿರ್ಧರಿಸಿತ್ತು. ಅದೇ ರೀತಿಯನ್ನು ನಿರ್ದೇಶನವನ್ನು ಜಿಲ್ಲಾ ನ್ಯಾಯಾಲಯಕ್ಕೂ ನೀಡಲಾಗಿದೆ.

ಇದನ್ನೂ ಓದಿ... ಔಷಧ ಕಂಪನಿ ಅಧಿಕಾರಿ ವಿಚಾರಣೆಗೆ ಬಿಜೆಪಿ ಆಕ್ಷೇಪ: ಶಿವಸೇನಾ ಖಂಡನೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.