ಬುಧವಾರ, ಆಗಸ್ಟ್ 17, 2022
30 °C

ಕೋವಿಡ್‌: ರೋಗಿ ಮನೆ ಹೊರಗೆ ಪೋಸ್ಟರ್‌ ಅಂಟಿಸುವಂತಿಲ್ಲ– ’ಸುಪ್ರೀಂ‘

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ರೋಗಿಗಳ ಮನೆಯ ಹೊರಗಡೆ ಪೋಸ್ಟರ್‌ಗಳು ಅಥವಾ ಸೂಚನಾ ಫಲಕಗಳನ್ನು ಅಳವಡಿಸಬಾರದು ಎಂದು ಸು‍ಪ್ರೀಂಕೋರ್ಟ್‌ ಬುಧವಾರ ಸೂಚನೆ ನೀಡಿದೆ.

ನಿರ್ದಿಷ್ಟ ಪ್ರಕರಣಗಳಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಿಸಿದ ಇಲಾಖೆ ಅಥವಾ ಪ್ರಾಧಿಕಾರವು ರೋಗಿಗಳ ಮನೆ ಮುಂದೆ ಪೋಸ್ಟರ್‌ಗಳನ್ನು ಅಂಟಿಸಬಹುದು ಎಂದು ನ್ಯಾಯಮೂರ್ತಿಗಳಾದ ಅಶೋಕ್‌ ಭೂಷಣ್‌, ಆರ್‌.ಎಸ್‌.ರೆಡ್ಡಿ, ಎಂ.ಆರ್.ಶಾ ಅವರಿರುವ ನ್ಯಾಯಪೀಠ ಹೇಳಿದೆ.

‘ಈ ವಿಷಯವಾಗಿ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. ಹೀಗಾಗಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಈ ರೀತಿ ಪೋಸ್ಟರ್‌ಗಳನ್ನು ಅಂಟಿಸಬಾರದು’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ವಿಲೇವಾರಿ ಮಾಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು