ಮಂಗಳವಾರ, ಮೇ 17, 2022
26 °C
ಅಭಿಮಾನಿಗಳಿಗೆ ಎಚ್ಚರಿಕೆಯಿಂದಿರುವಂತೆ ಮನವಿ ಮಾಡಿದ ನಟ

ಖ್ಯಾತ ತಮಿಳು ನಟ ಸೂರ್ಯಗೆ ಕೊರೊನಾ ಸೋಂಕು ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ತಮಿಳಿನ ಖಾತ ನಟ ಸೂರ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು,ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಷಯವನ್ನು ಭಾನುವಾರ ರಾತ್ರಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದೇ ವೇಳೆ ‘ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರುವಂತೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. 

‘ನಾನು ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದೇನೆ. ಎಲ್ಲರೂ ಎಚ್ಚರಿಕೆಯಿಂದಿರಿ. ಕೊರೊನಾ ಇನ್ನೂ ಪೂರ್ಣ ಹೋಗಿಲ್ಲ. ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿಲ್ಲ. ಈ ಬಗ್ಗೆ ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆಗೆ ಗಮನಕೊಡಬೇಕು‘ ಎಂದು ಹೇಳಿದ್ದಾರೆ. ಇದೇ ವೇಳೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು