ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಶಂಕರಪುರಂನ ಪಟಾಕಿ ಅಂಗಡಿಯಲ್ಲಿ ಸ್ಫೋಟ- ಐವರ ಸಾವು

Last Updated 27 ಅಕ್ಟೋಬರ್ 2021, 1:15 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಪಟ್ಟಣದ ಪಟಾಕಿ ಅಂಗಡಿಯೊಂದರಲ್ಲಿ ಮಂಗಳವಾರ ರಾತ್ರಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ ಐವರು ಮತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ದೀಪಾವಳಿಗೆ ಮುಂಚಿತವಾಗಿ ಶಂಕರಪುರಂನಲ್ಲಿ ಸ್ಥಾಪಿಸಲಾಗಿದ್ದ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವಿಗೀಡಾಗಿದ್ದು, ಅಷ್ಟೇ ಸಂಖ್ಯೆಯ ಮಂದಿ ಗಾಯಗೊಂಡಿದ್ದಾರೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡಿರುವ ಐವರನ್ನು ಕಲ್ಲಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.

ಶಂಕರಪುರಂ ಮತ್ತು ಕಲ್ಲಕುರಿಚಿಯಿಂದ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT