ಶನಿವಾರ, ಜುಲೈ 2, 2022
25 °C
ಮಸೂದೆಗೆ ತಮಿಳುನಾಡು ವಿಧಾನಸಭೆ ಅಂಗೀಕಾರ

ತಮಿಳುನಾಡು: ಕುಲಪತಿ ನೇಮಕ– ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ತಮಿಳುನಾಡಿನ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ನೇಮಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುವ ಮಸೂದೆಯನ್ನು ರಾಜ್ಯ ವಿಧಾನಸಭೆ ಅಂಗೀಕರಿಸಿದೆ.

ಪ್ರಸ್ತುತ ರಾಜ್ಯದಲ್ಲಿರುವ 13 ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರು ಕುಲಾಧಿಪತಿಗಳಾಗಿದ್ದು, ಅವರೇ ಕುಲಪತಿಗಳನ್ನು ನೇಮಿಸುತ್ತಿದ್ದರು. ಇದೀಗ ಅವರ ಅಧಿಕಾರವನ್ನು ಕಿತ್ತುಕೊಳ್ಳುವ ಮಸೂದೆ ಅಂಗೀಕಾರಗೊಂಡಿದೆ. ರಾಜ್ಯಪಾಲ ಆರ್.ಎನ್.ರವಿ ಅವರು ರಾಜ್ಯ, ಕೇಂದ್ರ ಹಾಗೂ ಖಾಸಗಿ ವಿಶ್ವ ವಿದ್ಯಾಲಯಗಳ ಕುಲಪತಿಗಳ ಸಮಾವೇಶಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಉನ್ನತ ಶಿಕ್ಷಣ ಸಚಿವ ಕೆ.ಪೊನ್‌ಮುಡಿ ಅವರು, ವಿಶ್ವ ವಿದ್ಯಾಲಯಗಳಿಗೆ ಕುಲಪತಿಗಳ ನೇಮಕ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುವ 'ವಿಶ್ವ ವಿದ್ಯಾಲಯಗಳ ಕಾನೂನು' ಮಸೂದೆಯನ್ನು ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದರು. ಈ ಮಸೂದೆ ಮಂಡನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದರೆ, ದಿ. ಜೆ.ಜಯಲಲಿತಾ ಅವರ ಕುರಿತಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಕೆ.ಸೆಲ್ವಪೆರುಂಥಗೈ ಅವರ ಟೀಕೆ ವಿರೋಧಿಸಿ ಮಸೂದೆ ಮಂಡನೆಗೂ ಮುನ್ನವೇ ಎಐಡಿಎಂಕೆ ಸದಸ್ಯರು ಸಭಾತ್ಯಾಗ ಮಾಡಿದರು. 

ಈ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, 'ಶೈಕ್ಷಣಿಕ ಸಂಸ್ಥೆಗಳಿಗೆ ಶಿಕ್ಷಣ ತಜ್ಞರನ್ನು ಆಯ್ಕೆ ಮಾಡುವ ಅಧಿಕಾರ ರಾಜ್ಯಪಾಲರ ಬಳಿಯಿದ್ದರೆ, ಅದರಿಂದ ಕಾರ್ಯ ಚಟುವಟಿಕೆಗಳು ಮತ್ತು ಅಧಿಕಾರಗಳೊಂದಿಗೆ ಸಂಘರ್ಷವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲೂ ವಿ.ವಿ.ಗಳ ಕುಲಪತಿಗಳನ್ನು ಸರ್ಕಾರವೇ ನೇಮಕ ಮಾಡುತ್ತದೆ. ಅಲ್ಲದೆ ತೆಲಂಗಾಣ, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲೂ ಕುಲಪತಿಗಳನ್ನು ಸರ್ಕಾರಗಳೇ ನೇಮಿಸುತ್ತವೆ ಹೊರತು, ರಾಜ್ಯಪಾಲರು ಅಲ್ಲ' ಎಂದು ಹೇಳಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು