ಶನಿವಾರ, ಜನವರಿ 28, 2023
16 °C

ತಮಿಳುನಾಡು: ಇಂಜೆಕ್ಷನ್‌ ಪಡೆದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವು

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಚೆನ್ನೈ: ಖಾಸಗಿ ಕ್ಲಿನಿಕ್‌ನಲ್ಲಿ ಇಂಜೆಕ್ಷನ್‌ ಪಡೆದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ 6 ವರ್ಷದ ಬಾಲಕ ‘ಕವಿ ದೇವನಾಥನ್‌‘ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕವಿ ದೇವನಾಥನ್‌ ಜ್ವರದಿಂದ ಬಳಲುತ್ತಿದ್ದರು. ಅವರ ತಂದೆ ಮಹೇಶ್ವರನ್‌ ಸ್ಥಳೀಯ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ನರ್ಸ್‌ ಇಂಜೆಕ್ಷನ್‌ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಕವಿ ದೇವನಾಥನ್‌ ಮೃತಪಟ್ಟರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಸಂಬಂಧ ಕ್ಲಿನಿಕ್‌ನ ನರ್ಸ್‌ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು