ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ: ಎರಡು ವಾರದಲ್ಲಿ 5ನೇ ಪ್ರಕರಣ

Last Updated 27 ಜುಲೈ 2022, 10:47 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿನಲ್ಲಿ 12ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರಗಳ ಅವಧಿಯಲ್ಲಿ ವರದಿಯಾಗಿರುವ ಐದನೇ ಪ್ರಕರಣ ಇದಾಗಿದೆ.

ಶಿವಗಂಗಾ ಜಿಲ್ಲೆಯ ತಮ್ಮ ಮನೆಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಗಣಿತ ಮತ್ತು ಜೀವಶಾಸ್ತ್ರದಲ್ಲಿ ಕಲಿಕೆ ನನಗೆ ಕಷ್ಟವಾಗುತ್ತಿದೆ ಎಂದು ಡೆತ್‌ ನೋಟ್‌ ಬರೆದಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ತಮಿಳುನಾಡಿನ ವಿರುಧ್‌ನಗರ್‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಯ್ಯಂಪಟ್ಟಿ ಗ್ರಾಮದಲ್ಲಿರುವ ಮನೆಯಲ್ಲಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

13 ಜುಲೈನಿಂದ ಈವರೆಗೆ 12ನೇ ತರಗತಿಯ ಇತರ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಮಿಳುನಾಡಿನಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT