ಚೆನ್ನೈ: ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನೀಡಿರುವ ಸೂಚನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ಇದಕ್ಕೆ ಕಾರಣರಾದವರನ್ನು ದಕ್ಷಿಣದಿಂದ ಹೊರಗಟ್ಟಬೇಕು ಎಂದು ಅವರು ಗುಡುಗಿದ್ದಾರೆ.