ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿ ಐಪಿಒ: ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧ

Last Updated 15 ಫೆಬ್ರುವರಿ 2022, 2:24 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಷೇರುಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಐಪಿಒ ಕುರಿತಂತೆ ಎಲ್‌ಐಸಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಅರ್ಜಿ ಸಲ್ಲಿಸಿದೆ. ಶೇಕಡ 5ರಷ್ಟು ಷೇರುಗಳನ್ನು ಮಾರಾಟ ಮಾಡಲು ಎಲ್‌ಐಸಿ ನಿರ್ಧರಿಸಿದೆ.

ಈ ನಡೆ ಖಾಸಗೀಕರಣದತ್ತ ಹೆಜ್ಜೆಯಾಗಿದೆ. ಕೇಂದ್ರದ ನಿರ್ಧಾರ ಸರಿಯಲ್ಲ. ಸರ್ಕಾರ ಇಂತಹ ಸಂಸ್ಥೆಗಳನ್ನು ಬೆಳೆಸಬೇಕು, ಅದರ ಬದಲು ಹಂತಹಂತವಾಗಿ ಮಾರಾಟ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.

ಎಲ್ಐಸಿ ಹಲವು ವರ್ಷಗಳಿಂದ ಜನರ ಅಗತ್ಯತೆಗಳನ್ನು ಪೂರೈಸುತ್ತಾ ಬಂದಿದೆ. ಜನರ ನಂಬಿಕೆ ಗಳಿಸಿ, ಸಾಮಾಜಿಕ ಭದ್ರತೆ ಒದಗಿಸಿದೆ. ಅಂತಹ ಸಂಸ್ಥೆಯನ್ನು ಸರ್ಕಾರ ಈಗ ಹಾಳುಗೆಡವಲು ಹೊರಟಿದೆ ಎಂದು ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT