ಬುಧವಾರ, ಡಿಸೆಂಬರ್ 2, 2020
26 °C

ನಾವು ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸುತ್ತೇವೆ: ಪನ್ನೀರ್‌ಸೆಲ್ವಂ

ಎಎನ್‌ಐ Updated:

ಅಕ್ಷರ ಗಾತ್ರ : | |

ಚೆನ್ನೈ: ನಾವು ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ತಮಿಳುನಾಡಿನ ಉಪ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ಹೇಳಿದರು.

ಚೆನ್ನೈನಲ್ಲಿ ನಡೆದ ಎರಡನೇ ಹಂತದ ಮೆಟ್ರೊ ಯೋಜನೆಗೆ ಅಡಿಪಾಯ ಕ್ರಾಯಕ್ರಮದಲ್ಲಿ ಅವರು ಮಾತನಾಡಿದರು.

ಗೃಹ ಸಚಿವ ಅಮಿತ್‌ ಶಾ ಮಾತನಾಡಿ, ‘ದೇಶದ ಎರಡು ರಾಜ್ಯಗಳಲ್ಲಿ ಮಾತ್ರ ರಕ್ಷಣಾ ಕೈಗಾರಿಕಾ ಕಾರಿಡಾರ್‌ ಯೋಜನೆ ಸ್ಥಾಪಿಸುವುದಾಗಿ ಮೋದಿ ಸರ್ಕಾರ ಘೋಷಿಸಿದೆ. ತಮಿಳುನಾಡು ಆದರ ಭಾಗವಾಗಿದೆ’ ಎಂದು ಹೇಳಿದರು.

‘ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ರಾಜ್ಯಗಳಲ್ಲಿ ಸ್ಪರ್ಧಾತ್ಮಕತೆ ಹೆಚ್ಚಾಗಿದೆ. ಈ ವರ್ಷ ಉತ್ತಮ ಆಡಳಿತ ರಾಜ್ಯಗಳಲ್ಲಿ ತಮಿಳುನಾಡು ಪ್ರಥಮ ಸ್ಥಾನ ಪಡೆದಿರುವುದಕ್ಕೆ ನನಗೆ ಸಂತೋಷವಾಗಿದೆ’ ಎಂದರು.

‘ಮೋದಿ ಅವರು ಶ್ರೀಲಂಕಾಗೆ ಭೇಟಿ ನೀಡಿದಾಗ ಜಾಫ್ನಾವನ್ನು ಮರೆತಿರಲಿಲ್ಲ. ಅವರು ಅಲ್ಲಿನ ತಮಿಳರು ನೆಲೆಸಿರುವ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ತಮಿಳು ಸಹೋದರರು, ಸಹೋದರಿಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು  ತಮಿಳರಿಗೆ ಮನೆ ನಿರ್ಮಿಸಿಕೊಳ್ಳಲು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

‘ಕೆಲವೊಮ್ಮೆ ಡಿಎಂಕೆ ನಾಯಕರು ಮಾತನಾಡುವುದನ್ನು ನಾನು ಕೇಳಿದ್ದೇನೆ. ಡಿಎಂಕೆ ಮತ್ತು ಕಾಂಗ್ರೆಸ್‌ 10 ವರ್ಷಗಳ ಕಾಲ ಕೇಂದ್ರದಲ್ಲಿದ್ದವು. ಇದೀಗ ನಮ್ಮ ಪಕ್ಷದ ಅಧಿಕಾರದಲ್ಲಿದೆ. ಯಾರ ಅಧಿಕಾರಾವಧಿಯಲ್ಲಿ ತಮಿಳುನಾಡಿಗೆ ಹೆಚ್ಚಿನ ಅನುದಾನ ದೊರೆತಿದೆ ಎನ್ನುವ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ಧೇವೆ’ ಎಂದು ಶಾ ಸವಾಲು ಹಾಕಿದರು.

ಕಾರ್ಯಕ್ರಮದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

**

**

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು