ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟಾಕಿ ದುರಂತ: 19 ಮಂದಿ ಸಾವು, ಕುಟುಂಬಸ್ಥರಿಗೆ ಒಟ್ಟು ₹ 5 ಲಕ್ಷ ಪರಿಹಾರ

Last Updated 13 ಫೆಬ್ರವರಿ 2021, 4:31 IST
ಅಕ್ಷರ ಗಾತ್ರ

ಚೆನ್ನೈ: ಜಿಲ್ಲೆಯ ಸತ್ತೂರು ಬಳಿ ಇರುವ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಅಚ್ಚಂಕುಲಂ ಗ್ರಾಮದಲ್ಲಿ ಈ ಕಾರ್ಖಾನೆ ಇದೆ. ಪಟಾಕಿಗಳನ್ನು ತಯಾರಿಸಲು ಕೆಲವು ರಾಸಾಯನಿಕಗಳನ್ನು ಬೆರೆಸುತ್ತಿರುವಾಗ ಸ್ಫೋಟ ಸಂಭವಿಸಿದೆ. 30 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ತಲಾ ₹ 3 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ. ಸ್ಫೋಟ ಕುರಿತು ತನಿಖೆಗೂ ಅವರು ಆದೇಶಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ...
ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT