ಬುಧವಾರ, ಮೇ 18, 2022
24 °C

ಶ್ರೀಲಂಕಾ ನೆರವಿಗೆ ಡಿಎಂಕೆ ಸಂಸದರಿಂದ ಒಂದು ತಿಂಗಳ ವೇತನ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಚೆನ್ನೈ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರಿಲಂಕಾದ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನವನ್ನು ನೀಡಲು ಡಿಎಂಕೆ ಪಕ್ಷದ ರಾಜ್ಯಸಭೆ ಹಾಗೂ ಲೋಕಸಭೆ ಸದಸ್ಯರು ನಿರ್ಧರಿಸಿದ್ದಾರೆ.

ಈ ಬಗ್ಗೆ ಡಿಎಂಕೆ ಹೇಳಿಕೆ ಬಿಡುಗಡೆ ಮಾಡಿದ್ದು, 'ಡಿಎಂಕೆಯ ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಿದ್ದಾರೆ' ಎಂದು ತಿಳಿಸಿದೆ.

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರಿಲಂಕಾದ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು, ಮುಖ್ಯಮಂತ್ರಿ ಪರಿಹಾರ ನಿಧಿಗೆ ಉದಾರ ಕೊಡುಗೆ ನೀಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಮಂಗಳವಾರ ರಾಜ್ಯದ ಜನರಲ್ಲಿ ಮನವಿ ಮಾಡಿದ್ದರು.

ಶ್ರೀಲಂಕಾ ಪರಿಹಾರ ನಿಧಿಗೆ ₹ 1 ಕೋಟಿ ನೀಡುವುದಾಗಿ ಡಿಎಂಕೆ ಈಗಾಗಲೇ ಘೋಷಿಸಿದೆ.

ಇದನ್ನೂ ಓದಿ: 

ರಾಜ್ಯ ಸರ್ಕಾರವು ಶ್ರೀಲಂಕಾ ನಾಗರಿಕರಿಗಾಗಿ ಅಗತ್ಯ ವಸ್ತುಗಳು ಮತ್ತು ನಿಧಿ ಸಂಗ್ರಹಿಸುವುದಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಅವರು ಅನುಮತಿ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು