ಭಾನುವಾರ, 11 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 11 ಮಂದಿ ಸಾವು

Last Updated 12 ಫೆಬ್ರವರಿ 2021, 20:11 IST
ಅಕ್ಷರ ಗಾತ್ರ

ಚೆನ್ನೈ: ಜಿಲ್ಲೆಯ ಸತ್ತೂರು ಬಳಿ ಇರುವ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ, 15 ಜನ ಕಾರ್ಮಿಕರು ಮೃತಪಟ್ಟು 30 ಮಂದಿ ಗಾಯಗೊಂಡಿದ್ದಾರೆ.

ಅಚ್ಚಂಕುಲಂ ಗ್ರಾಮದಲ್ಲಿ ಈ ಕಾರ್ಖಾನೆ ಇದೆ. ಪಟಾಕಿಗಳನ್ನು ತಯಾರಿಸಲು ಕೆಲವು ರಾಸಾಯನಿಕಗಳನ್ನು ಬೆರೆಸುತ್ತಿರುವಾಗ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ತಲಾ ₹ 3 ಪಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ. ಸ್ಫೋಟ ಕುರಿತು ತನಿಖೆಗೂ ಅವರು ಆದೇಶಿಸಿದ್ದಾರೆ.

ಅವಘಡ ಹೇಗೆ ಸಂಭವಿಸಿತು?
ಪಟಾಕಿ ತಯಾರಿಸಲು ಕೆಲವು ನಿರ್ದೀಷ್ಟ ರಾಸಾಯನಿಕಗಳನ್ನು ಬೆರೆಸುತ್ತಿರುವಾಗ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಚ್ಚನ್‌ಕುಲಂ ಗ್ರಾಮಕ್ಕೆ ಧಾವಿಸಿರುವ 10ರಷ್ಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನವಾಗಿದೆ.

ಅಗ್ನಿಶಾಮಕ ಸಿಬ್ಬಂದಿಗಳ ಪ್ರಾಥಮಿಕ ಮಾಹಿತಿಗಳ ಪ್ರಕಾರ, ಘಟನೆಯಲ್ಲಿ 10ರಷ್ಟು ಮಂದಿ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ...
ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದಾರೆ. ಅಲ್ಲದೆ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿ ಘೋಷಿಸಿದ್ದಾರೆ.

ಇದನ್ನೂ ಓದಿ:

ರಾಹುಲ್ ಗಾಂಧಿ ಸಂತಾಪ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿದ್ದಾರೆ. ಅಲ್ಲದೆ ತುರ್ತಾಗಿ ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಎಲ್ಲ ನೆರವು ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT