ಶನಿವಾರ, ಮಾರ್ಚ್ 25, 2023
29 °C

ಪೊಲೀಸ್‌ ಸಿಬ್ಬಂದಿಗೆ ವಾರದ ರಜೆ ಘೋಷಿಸಿದ ತಮಿಳುನಾಡು ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆದೇಶದ ಅನ್ವಯ ಪೊಲೀಸ್ ಸಿಬ್ಬಂದಿಗೆ ವಾರದ ರಜೆ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಬುಧವಾರ ತಮಿಳುನಾಡು ಸರ್ಕಾರ ತಿಳಿಸಿದೆ. 

ಈ ಆದೇಶವು ಗ್ರೇಡ್-II ಹಂತದ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಹೆಡ್ ಕಾನ್‌ಸ್ಟೆಬಲ್‌ಗಳವರೆಗಿನ ಸಿಬ್ಬಂದಿಗೆ ಅನ್ವಯವಾಗಲಿದೆ.

ವಾರಕ್ಕೆ ಒಂದು ದಿನ ರಜೆ ನೀಡುವುದರಿಂದ ಪೊಲೀಸ್ ಸಿಬ್ಬಂದಿ ಆಯಾಸ ಪರಿಹರಿಸಿಕೊಂಡು, ಹೊಸ ಚೈತನ್ಯದೊಂದಿಗೆ ಕೆಲಸಕ್ಕೆ ಹಾಜರಾಗಲು ಹಾಗೂ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಹಾಗೂ ಎಂಥದ್ದೇ ಸವಾಲಿನ ಕೆಲಸವನ್ನು ಎದುರಿಸಲು ನೆರವಾಗುತ್ತದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಸ್ಟಾಲಿನ್ ಅವರು ಸೆ.13 ರಂದು ವಿಧಾನಸಭೆಯ ಅಧಿವೇಶನದಲ್ಲಿ ಪೊಲೀಸ್ ಇಲಾಖೆಗೆ ಅನುದಾನದ ಬೇಡಿಕೆಯ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ, ಪೊಲೀಸ್ ಸಿಬ್ಬಂದಿಗೆ ವಾರದ ರಜೆ ನೀಡುವ ಕುರಿತು ಘೋಷಿಸಿದ್ದರು.

ವಾರದ ರಜೆಯಿಂದ ಪೊಲೀಸರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು, ತಮ್ಮ ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯಲು ಅನುಕೂಲವಾಗುತ್ತದೆ ಎಂದು ಸ್ಟಾಲಿನ್ ಹೇಳಿದ್ದರು. ಮುಖ್ಯಮಂತ್ರಿ ಆದೇಶದ ಆಧರಿಸಿ, ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು