ಭಾನುವಾರ, ಜುಲೈ 25, 2021
22 °C
ತಮಿಳುನಾಡು ಸರ್ವಪಕ್ಷ ನಿಯೋಗದಿಂದ ಜಲಶಕ್ತಿ ಸಚಿವರ ಭೇಟಿ

ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ: ದುರೈ ಮುರುಗನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ/ಚೆನ್ನೈ: ತಮಿಳುನಾಡಿನ ಸರ್ವಪಕ್ಷ ನಿಯೋಗವು ಮೇಕೆದಾಟು ಯೋಜನೆ ಕುರಿತು ಕೇಂದ್ರ ಜಲಶಕ್ತಿ ಇಲಾಖೆ ಸಚಿವರನ್ನು ಭೇಟಿ ಮಾಡಿ ಚರ್ಚಿಸಿತು. ‘ಯೋಜನೆ ಕುರಿತು ಕರ್ನಾಟಕ ಸರ್ಕಾರ ಸಿದ್ಧಪಡಿಸಿದ ವಿವರವಾದ ಯೋಜನಾ ವರದಿ (ಡಿಪಿಆರ್) ಏಕಪಕ್ಷೀಯವಾಗಿದ್ದು, ಅದನ್ನು ಸ್ವೀಕರಿಸಲಾಗುವುದಿಲ್ಲ’ ಎಂದು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಿಳಿಸಿದ್ದಾರೆ ಎಂದು ನಿಯೋಗ ಹೇಳಿಕೊಂಡಿದೆ. 

ಯೋಜನೆ ಮುಂದುವರಿಸಲು ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು, ಪುದುಚೇರಿ ಮತ್ತು ಕೇರಳದ ಅನುಮತಿ ಬೇಕಾಗುತ್ತದೆ ಎಂದು ಶೇಖಾವತ್ ನಿಯೋಗಕ್ಕೆ ತಿಳಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ತಿಳಿಸಿದ್ದಾರೆ.

ಜುಲೈ 12ರಂದು ಚೆನ್ನೈನಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದ ಪ್ರತಿಯನ್ನು ದುರೈ ಮುರುಗನ್ ನೇತೃತ್ವದ 13 ರಾಜಕೀಯ ಪಕ್ಷಗಳ ಪ್ರತಿನಿಧಿಗಳ ನಿಯೋಗವು ಶೇಖಾವತ್‌ಗೆ ಹಸ್ತಾಂತರಿಸಿತು. ಕರ್ನಾಟಕದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಬಾರದು ಎಂದು ನಿಯೋಗ ಮನವಿ ಮಾಡಿತು.

‘ನಿಯಮಗಳನ್ನು ಪಾಲಿಸದ ಕರ್ನಾಟಕ ಸರ್ಕಾರಕ್ಕೆ ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಕುರಿತಂತೆ ಯಾವುದೇ ಭರವಸೆ ನೀಡಿಲ್ಲ’ ಎಂಬುದಾಗಿ ಶೇಖಾವತ್ ತಿಳಿಸಿದ್ದಾರೆ ಎಂದು ಮುರುಗನ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು