ವಿಡಿಯೊ | ಕುರ್ಚಿ ತರಲು ವಿಳಂಬ: ಕಾರ್ಯಕರ್ತರ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ

ಚೆನ್ನೈ: ಕೂರುವುದಕ್ಕೆ ಕುರ್ಚಿ ತರಲು ವಿಳಂಬ ಮಾಡಿದ ಡಿಎಂಕೆ ಪಕ್ಷದ ಕಾರ್ಯಕರ್ತರ ಮೇಲೆ ತಮಿಳುನಾಡು ಸಚಿವ ಎಸ್.ಎಂ. ನಾಸರ್ ಕಲ್ಲು ತೂರಾಟ ನಡೆಸಿದ್ದಾರೆ.
ತಿರುವಳ್ಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಚಿವರ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕಳೆದ ವರ್ಷ, ನಾಸರ್ ಅವರು ಕೇಂದ್ರ ಸರ್ಕಾರ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಿದೆ. ಹಾಗಾಗಿ ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ಹಾಲನ್ನು ಜಿಎಸ್ಟಿಯಿಂದ ಹೊರಗಿಡುವ ಬಗ್ಗೆ ಡಿಎಂಕೆ ಸಚಿವರ ನಿರ್ಲಕ್ಷ್ಯವೇ ಕಾರಣ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಟೀಕಿಸಿದ್ದರು.
ಓದಿ... PSI ಹಗರಣ ಆರೋಪಿ ಆರ್.ಡಿ ಪಾಟೀಲ್ಗೆ ಬಿಜೆಪಿ ಟಿಕೆಟ್ ಖಚಿತ: ಕಾಂಗ್ರೆಸ್ ವ್ಯಂಗ್ಯ
#WATCH | Tamil Nadu Minister SM Nasar throws a stone at party workers in Tiruvallur for delaying in bringing chairs for him to sit pic.twitter.com/Q3f52Zjp7F
— ANI (@ANI) January 24, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.