ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಗೆ ತಮಿಳುನಾಡು ಅರ್ಜಿ

Last Updated 19 ಫೆಬ್ರುವರಿ 2023, 10:41 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಸಿಂಧುತ್ವವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

‘ವೈದ್ಯಕೀಯ ಹಾಗೂ ದಂತ ವೈದ್ಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಈ ಸಾಮಾನ್ಯ ಪರೀಕ್ಷೆಯು ಒಕ್ಕೂಟ ವ್ಯವಸ್ಥೆಯ ತತ್ವಕ್ಕೆ ವಿರುದ್ಧವಾಗಿದೆ’ ಎಂದು ತಮಿಳುನಾಡು ಸರ್ಕಾರವು ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ವಕೀಲ ಅಮಿತ್‌ ಆನಂದ್ ತಿವಾರಿ ಅವರ ಮೂಲಕ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

‘ಶಿಕ್ಷಣ ಕುರಿತು ರಾಜ್ಯಗಳು ನಿರ್ಧಾರ ಕೈಗೊಳ್ಳುವುದಕ್ಕೆ ಸಂಬಂಧಿಸಿದ ಸ್ವಾಯತ್ತತೆಯನ್ನು ಈ ಪರೀಕ್ಷೆಯು (ನೀಟ್) ಕಸಿದುಕೊಳ್ಳುತ್ತದೆ. ಹೀಗಾಗಿ, ಈ ಪರೀಕ್ಷಾ ವ್ಯವಸ್ಥೆಯು ಸಂವಿಧಾನದ ಮೂಲ ಸ್ವರೂಪದ ಉಲ್ಲಂಘನೆಯೂ ಆಗುತ್ತದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT