ಗುರುವಾರ , ಜುಲೈ 7, 2022
23 °C

ತಮಿಳುನಾಡು ಚುನಾವಣೆ: ತಿರುಚನಾಪಳ್ಳಿ ಡಿಸಿ, ಎಸ್‌ಪಿ ವರ್ಗಾವಣೆಗೆ ಇಸಿ ಆದೇಶ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಚೆನ್ನೈ: ಭಾರತೀಯ ಚುನಾವಣೆ ಆಯೋಗವು ತಿರುಚನಾಪಳ್ಳಿಯ ಜಿಲ್ಲಾಧಿಕಾರಿ, ಪೊಲೀಸ್‌ ಸೂಪರಿಂಟೆಂಡೆಂಟ್‌ (ಎಸ್‌ಪಿ) ಹಾಗೂ ಸಬ್‌-ಕಲೆಕ್ಟರ್‌ ಅವರನ್ನು ಚುನಾವಣೇತರ ಹುದ್ದೆಗಳಿಗೆ ನೇಮಿಸಿ ಆದೇಶ ಹೊರಡಿಸಿದೆ. ಚುನಾವಣಾ ಅಧಿಕಾರಿಗಳು ಜಿಲ್ಲೆಯಲ್ಲಿ ಗುರುವಾರ ₹ 1 ಕೋಟಿ ವಶಕ್ಕೆ ಪಡೆದಿದ್ದರು. ಅದಾದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಅಧಿಕಾರಿಗಳ ವರ್ಗಾವಣೆ ಸಂಬಂಧ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗವು, ವಿಶೇಷ ವೀಕ್ಷಕರ ವರದಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ. ತಿರುಚನಾಪಳ್ಳಿ ಎಸ್‌ಪಿ ಪಿ.ರಾಜನ್‌, ಜಿಲ್ಲಾಧಿಕಾರಿ ಎಸ್‌.ಶಿವರಾಸು ಮತ್ತು ಶ್ರೀರಂಗಂನ ಉಪ ಜಿಲ್ಲಾಧಿಕಾರಿ ನಿಶಾಂತ್‌ ಕೃಷ್ಣ ಅವರನ್ನು ಚುನಾವಣೇತರ ಹುದ್ದೆಗಳಿಗೆ ವರ್ಗಾಯಿಸಲು ಅನುಮೋದನೆ ನೀಡಲಾಗಿದೆ ಎಂದೂ ಹೇಳಿದೆ.

 

ರಾಜನ್‌ ಅವರ ಜಾಗಕ್ಕೆ ಎ. ಮಯಿಲ್ವಗನನ್‌ ಹಾಗೂ ಶಿವರಾಸು ಸ್ಥಾನಕ್ಕೆ ಎಸ್‌. ದಿವ್ಯದರ್ಶಿನಿ ಅವರನ್ನು ನೇಮಿಸಲಾಗಿದೆ.

 

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್‌ 6 ರಂದು ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಾಂಗ್ರೆಸ್‌-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಗಳ ನಡುವೆ ನೇರ ಹಣಾಹಣಿ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು