ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಚುನಾವಣೆ: ಎಡಪ್ಪಾಡಿಯಿಂದ ಕಣಕ್ಕಿಳಿಯಲಿರುವ ಸಿಎಂ ಪಳನಿಸ್ವಾಮಿ

Last Updated 5 ಮಾರ್ಚ್ 2021, 9:14 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಎಡಿಎಂಕೆ ಶುಕ್ರವಾರ ಬಿಡುಗಡೆ ಮಾಡಿದೆ.

ಆರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಎಡಪ್ಪಾಡಿಯಿಂದ ಸ್ಪರ್ಧಿಸಲಿದ್ದಾರೆ. ಉಪಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಅವರು ಬೊಡಿನಾಯಕ್ಕನೂರ್‌ನಿಂದ ಸ್ಪರ್ಧಿಸಲಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ನಡೆಯಲಿದೆ. ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯೂ ಅಂದೇ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ತಮಿಳುನಾಡು, ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇತ್ತೀಚೆಗೆ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT