ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಮುಂದುವರಿದ ಭಾರಿ ಮಳೆ: ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Last Updated 10 ನವೆಂಬರ್ 2021, 4:46 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಹಲವೆಡೆ ಭಾರಿ ಮಳೆ ಮುಂದುವರಿದಿದೆ. ಕಡಲೂರು, ವಿಲುಪುರಂ, ಶಿವಗಂಗಾ, ರಾಮನಾಥಪುರಂ, ಕರೈಕಲ್‌ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಚೆನ್ನೈ ನಗರದ ಹಲವೆಡೆ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಸಂಚಾರಕ್ಕೆ ತೊಡಕಾಗಿದೆ.

ನಾಗಪಟ್ಟಣಂನಲ್ಲಿ ಭಾರಿ ಮಳೆಯಾಗುತ್ತಿದೆ. ಚೆನ್ನೈ, ಕಂಚೀಪುರಂ, ತಿರುವಳ್ಳೂರ್, ಚೆಂಗಲ್‌ಪಟ್ಟು, ಕಡಲೂರು, ನಾಗಪಟ್ಟಣಂ, ತಾಂಜಾವೂರ್, ತಿರುವಾರೂರ್ ಹಾಗೂ ಮಯಿಲದುತರೈಗಳಲ್ಲಿ ಬಾರಿ ಮಳೆಯ ಕಾರಣ ಎರಡು ದಿನಗಳ ರಜೆ ಘೋಷಿಸಲಾಗಿದೆ.

ಕೊಯಮತ್ತೂರಿನಲ್ಲಿಯೂ ಶಾಲೆ–ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮವಾಗಿ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT