ಚೆನ್ನೈ: ರಾಜ್ಯಪಾಲರ ಅಧಿಕಾರ ದುರುಪಯೋಗ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಶೀಘ್ರದಲ್ಲೇ ದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್ ಮಾಡಿ ಟ್ವೀಟಿಸಿರುವ ಅವರು, ‘ಪ್ರೀತಿಯ ದೀದಿ ಅವರು ನನಗೆ ದೂರವಾಣಿ ಕರೆ ಮಾಡಿದ್ದರು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರದ ದುರುಪಯೋಗದ ಕುರಿತು ಚರ್ಚಿಸಿದರು. ಈ ಬಗ್ಗೆ ತಮ್ಮ ಕಳವಳ ಮತ್ತು ಬೇಸರವನ್ನು ಹಂಚಿಕೊಂಡಿದ್ದಾರೆ. ಅವರು ಪ್ರತಿಪಕ್ಷದ ಸಿಎಂಗಳ ಸಭೆಗೆ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

'ರಾಜ್ಯದ ಸ್ವಾಯತ್ತತೆಯನ್ನು ಎತ್ತಿಹಿಡಿಯಲು ಡಿಎಂಕೆ ಬದ್ಧವಾಗಿದೆ. ಈ ಬಗ್ಗೆ ನಾನು ಅವರಿಗೆ ಭರವಸೆ ನೀಡಿದ್ದೇನೆ. ದೆಹಲಿಯಲ್ಲಿ ಶೀಘ್ರದಲ್ಲೇ ಪ್ರತಿಪಕ್ಷದ ಸಿಎಂಗಳ ಸಭೆ ನಡೆಯಲಿದೆ’ ಎಂದು ಸ್ಟಾಲಿನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.