ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳಿಸೈ ಸೌಂದರರಾಜನ್ ಪುದುಚೇರಿ ಗವರ್ನರ್ ಆಗಿ ಪದಗ್ರಹಣ

Last Updated 18 ಫೆಬ್ರುವರಿ 2021, 11:12 IST
ಅಕ್ಷರ ಗಾತ್ರ

ಪುದುಚೇರಿ: ತೆಲಂಗಾಣದ ರಾಜ್ಯಪಾಲೆ ಡಾ. ತಮಿಳಿಸೈ ಸೌಂದರರಾಜನ್ ಅವರು ಗುರುವಾರ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿದ್ದಾರೆ.

ಫೆಬ್ರುವರಿ 16ರಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಡಾ. ಕಿರಣ್ ಬೇಡಿ ಅವರನ್ನು ಪದಚ್ಯುತಿಗೊಳಿಸಲಾಗಿತ್ತು.

ಬಳಿಕ ತಮಿಳಿಸೈ ಸೌಂದರರಾಜನ್ ಅವರು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಹೆಚ್ಚುವರಿ ಜವಾಬ್ದಾರಿ ವಹಿಸುವಂತೆ ರಾಷ್ಟ್ರಪತಿ ಭವನ ಸೂಚಿಸಿತ್ತು.

ಪುದುಚೇರಿಯ ರಾಜ ನಿವಾಸದಲ್ಲಿ ಗುರುವಾರ ಬೆಳಗ್ಗೆ ನಡೆದ ಸಮಾರಂಭದಲ್ಲಿ ತಮಿಳಿಸೈಸೌಂದರರಾಜನ್ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಪುದುಚೇರಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಮಿಳು ಭಾಷೆ ಮಾತನಾಡುವ ವ್ಯಕ್ತಿಯೊಬ್ಬರು ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಳ್ಳುತ್ತಿದ್ದಾರೆ. ಈ ಮೂಲಕ ತಮಿಳುಸಾಯಿ ಸೌಂದರರಾಜನ್ ವಿಶಿಷ್ಟ ದಾಖಲೆ ಬರೆದರು. ಅವರು ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷೆ ಕೂಡಾ ಆಗಿದ್ದಾರೆ.

ಕಿರಣ್ ಬೇಡಿ ಅವರು 2016ರಿಂದಲೇ ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ವಹಿಸಿದ್ದರು. ಆದರೆ ಪುದುಚೇರಿಯ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪ ಹಾಗೂ ಭಾರಿ ಪ್ರತಿಭಟನೆ ಎದುರಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT