ಸೋಮವಾರ, ಜನವರಿ 17, 2022
21 °C

ಪೊಂಗಲ್ ಹಬ್ಬದಂದು ನನ್ನನ್ನು ಭೇಟಿಯಾಗುವುದು ಬೇಡ: ಸ್ಟಾಲಿನ್

ಪಿಟಿಐ Updated:

ಅಕ್ಷರ ಗಾತ್ರ : | |

PTI Image

ಚೆನ್ನೈ: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಶುಭಕೋರುವ ಸಲುವಾಗಿ ವೈಯಕ್ತಿಕವಾಗಿ ತಮ್ಮನ್ನು ಭೇಟಿಯಾಗುವುದು ಬೇಡ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಬುಧವಾರ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಸಂದೇಶ ಕಳುಹಿಸಿರುವ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು ಎಂದಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಹೆಚ್ಚಾಗಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ತಮ್ಮನ್ನು ಭೇಟಿಯಾಗಿ ಶುಭ ಕೋರಲು ಬರುತ್ತಾರೆ. ಇದರಿಂದ ಜನಸಂದಣಿ ಉಂಟಾಗುತ್ತದೆ. ಅಲ್ಲದೆ, ಸೋಂಕು ಹರಡುವ ಸಾಧ್ಯತೆಯೂ ಹೆಚ್ಚಿರುತ್ತದೆ. ಅದಕ್ಕೆ ಅವಕಾಶ ಕೊಡುವುದು ಬೇಡ ಎನ್ನುವುದು ಸ್ಟಾಲಿನ್ ಅವರ ಉದ್ದೇಶವಾಗಿದೆ.

ನಾವೆಲ್ಲರೂ ಕೋವಿಡ್–19 ಸಂಬಂಧಿತ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಅದರಲ್ಲಿ ಯಾವುದೇ ರಿಯಾಯಿತಿಯಿಲ್ಲ. ಹೀಗಾಗಿ ವೈಯಕ್ತಿಕ ಭೇಟಿ ಬೇಡ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು