ಮಂಗಳವಾರ, ಸೆಪ್ಟೆಂಬರ್ 21, 2021
21 °C

ತಮಿಳುನಾಡು: ನೀಟ್ ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಯಂಕೊಂಡಂ: ತಮಿಳುನಾಡಿನಲ್ಲಿ ‘ನೀಟ್’ ಪರೀಕ್ಷೆ ಬರೆದ ಒಂದು ದಿನದ ಬಳಿಕ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕನಿಮೋಳಿ ಎಂದು ಗುರುತಿಸಲಾಗಿದೆ. ಪೋಷಕರಿಲ್ಲದ ವೇಳೆಯಲ್ಲಿ ಮನೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ಹೆತ್ತವರು ಮನೆಗೆ ವಾಪಸ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಕೀಲರ ಪುತ್ರಿಯಾಗಿದ್ದ ಕನಿಮೋಳಿ ವೈದ್ಯಕೀಯ ಪ್ರವೇಶಕ್ಕಾಗಿ ಭಾನುವಾರ ‘ನೀಟ್’ ಪರೀಕ್ಷೆ ಬರೆದಿದ್ದರು. ಆದರೆ, ಫಲಿತಾಂಶದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪರೀಕ್ಷೆ ಬರೆದು ಮನೆಗೆ ಹಿಂತಿರುಗಿದ ಬಳಿಕ ಕನಿಮೋಳಿ, ಪರೀಕ್ಷೆ ಕಠಿಣವಾಗಿತ್ತು ಎಂದು ಪೋಷಕರ ಬಳಿ ಆತಂಕ ವ್ಯಕ್ತಪಡಿಸಿದ್ದರು. ಘಟನೆಯ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು