ಶನಿವಾರ, ನವೆಂಬರ್ 26, 2022
23 °C

ಪಿಎಫ್‌ಐ ನಿಷೇಧಿಸಿದ ತಮಿಳುನಾಡು ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಕೇಂದ್ರ ಸರ್ಕಾರದ ಆದೇಶದಂತೆ ತಮಿಳುನಾಡು ಸರ್ಕಾರವು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾವನ್ನು (ಪಿಎಫ್‌ಐ) ಗುರುವಾರ ನಿಷೇಧಿಸಿದೆ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ಕಮಿಷನರ್‌ಗಳಿಗೆ ನಿಷೇಧವನ್ನು ಜಾರಿ ಮಾಡುವ ಜವಾಬ್ದಾರಿ ನೀಡಲಾಗಿದೆ.

ಕಾನೂನು ಬಾಹಿರ ಚಟುವಟಿಕೆಗ ತಡೆ ಕಾಯ್ದೆ ಅಡಿಯಲ್ಲಿ ಪಿಎಫ್‌ಐ ನಿಷೇಧಿಸಲು ಯಾವುದೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೊ ಅವೆಲ್ಲವನ್ನೂ ಮಾಡುವಂತೆ ತಮಿಳುನಾಡು ರಾಜ್ಯಪಾಲ ಆರ್‌.ಎನ್‌. ರವಿ ಅವರು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪಿಎಫ್ಐ  ನಿಷೇಧಿಸುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಬುಧವಾರ ನಿರ್ದೇಶನ ನೀಡಿತ್ತು.

ಟ್ವಿಟರ್‌ ಖಾತೆ ಸ್ಥಗಿತ: ಪಾಪ್ಯುಲರ್‌ ಫ್ರೆಂಟ್‌ ಆಫ್‌ ಇಂಡಿಯಾದ ಅಧಿಕೃತ ಟ್ವಿಟರ್‌ ಖಾತೆ @PFIOfficial ಅನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ.

ಭಾರತ ಸರ್ಕಾರವು ಪಿಎಫ್‌ಐ ಅನ್ನು ನಿಷೇಧ ಮಾಡಿರುವ ಕಾರಣಕ್ಕಾಗಿ ಇದರ ಅಧಿಕೃತ ಟ್ವಿಟರ್‌ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಪಿಎಫ್‌ಐ ಅಧಿಕೃತ ಟ್ವಿಟರ್‌ ಖಾತೆಯ ಪೇಜ್‌ನಲ್ಲಿ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು