ಶನಿವಾರ, ಏಪ್ರಿಲ್ 1, 2023
29 °C

ಜಲ್ಲಿಕಟ್ಟು: ಓರ್ವ ಸಾವು, 80 ಮಂದಿಗೆ ಗಾಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚೆನ್ನೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಮಧುರೈನ ಆವನಿಯಪುರಂ ಪ್ರದೇಶದಲ್ಲಿ ನಡೆದ ಜಲ್ಲಿಕಟ್ಟು ಗ್ರಾಮೀಣ ಕ್ರೀಡೆಯಲ್ಲಿ ಓರ್ವ ಮೃತಪಟ್ಟಿದ್ದು, 80 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ಅಧಿಕಾರಿಗಳ ಪ್ರಕಾರ ಗಾಯಗೊಂಡವರಲ್ಲಿ 38 ಗೂಳಿ ಪಳಗಿಸುವ ಸ್ಪರ್ಧಿಗಳು, 24 ಗೂಳಿ ಮಾಲೀಕರು ಹಾಗೂ 18 ಪ್ರೇಕ್ಷಕರು ಸೇರಿದ್ದಾರೆ.

ಇದನ್ನೂ ಓದಿ: 

ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಗೂಳಿ ಪಳಗಿಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಗ್ರಾಮೀಣ ಕ್ರೀಡೆಯು ವಿಜೃಂಭಣೆಯಿಂದ ನಡೆಯುತ್ತದೆ. ಆ ಮೂಲಕ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗುತ್ತದೆ.

 

 

 

ನೆರೆದಿದ್ದ ಜನರ ಹರ್ಷೋದ್ಗಾರ, ಕೇಕೆ ನಡುವೆ ಸುಮಾರು 300ರಷ್ಟು ಗೂಳಿಗಳನ್ನು ಜನರ ಗುಂಪಿಗೆ ಬಿಡಲಾಗಿತ್ತು. ಗೂಳಿ ತಿವಿತಕ್ಕೆ 18 ವರ್ಷದ ಬಾಲಮುರುಗನ್ ಎಂಬವರು ಮೃತಪಟ್ಟಿದ್ದಾರೆ.

 

ವರ್ಷಂಪ್ರತಿ ತಮಿಳುನಾಡಿನ ವಿವಿಧೆಡೆಗಳಲ್ಲಿ ಜಲ್ಲಿಕಟ್ಟು ಗ್ರಾಮೀಣ ಕ್ರೀಡೆ ಆಯೋಜಿಸಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು