ಭಾನುವಾರ, ಜುಲೈ 3, 2022
24 °C

ರಾಜಸ್ಥಾನ: ಗ್ರಾಮಗಳಲ್ಲಿ ಕುಟುಂಬದ ಮಹಿಳಾ ಮುಖ್ಯಸ್ಥರ ಹೆಸರಿನಲ್ಲಿ ನೀರಿನ ಸಂಪರ್ಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ಜಲ್ ಜೀವನ್ ಮಿಷನ್ ಅಡಿಯಲ್ಲಿ ಕುಟುಂಬದ ಮಹಿಳಾ ಮುಖ್ಯಸ್ಥರ ಹೆಸರಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನೀರಿನ ಸಂಪರ್ಕ ನೀಡುವ ಪ್ರಸ್ತಾಪವನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅನುಮೋದಿಸಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸುವ ಹೆಜ್ಜೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಸ್ತಾವನೆಯ ಪ್ರಕಾರ, ಗ್ರಾಮದ ನೀರು ಮತ್ತು ನೈರ್ಮಲ್ಯೀಕರಣ ಸಮಿತಿಯಲ್ಲಿ ಸುಮಾರು 50 ರಷ್ಟು ಸದಸ್ಯರು ಮಹಿಳೆಯರಿರಲಿದ್ದಾರೆ. ಉಳಿದ ಸದಸ್ಯರನ್ನು ಪಂಚಾಯಿತಿಗಳ ಸದಸ್ಯರು ಮತ್ತು ಸಮಾಜದ ದುರ್ಬಲ ವರ್ಗಗಳ ಪ್ರತಿನಿಧಿಗಳಾಗಿ ಆಯ್ಕೆ ಮಾಡಲಾಗುತ್ತದೆ.

ರಾಜ್ಯ ಸರ್ಕಾರದ ಈ ನಿರ್ಧಾರವು ಮಹಿಳೆಯರಿಗೆ ತಮ್ಮ ಗ್ರಾಮದ ಜಲ ಜೀವನ್ ಮಿಷನ್‌ನ ನಿರ್ವಹಣೆಯಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಎಂದು ಹೇಳಿಕೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು