ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1 ಲಕ್ಷ ಗ್ರಾಮಗಳಿಗೆ ನಲ್ಲಿ ನೀರು: ಜಲಶಕ್ತಿ ಸಚಿವಾಲಯ

Last Updated 15 ಜುಲೈ 2021, 8:43 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಪ್ರಾಯೋಜಕತ್ವದ ಜಲ ಜೀವನ ಮಿಷನ್‌ ಅಡಿಯಲ್ಲಿ ಒಂದು ಲಕ್ಷ ಗ್ರಾಮಗಳು ಮತ್ತು 50 ಸಾವಿರಕ್ಕಿಂತಲೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ನಲ್ಲಿ ನೀರು ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯವು ತಿಳಿಸಿದೆ.

ಕಳೆದ 23 ತಿಂಗಳ ಅವಧಿಯಲ್ಲಿ ಒಟ್ಟು 4.49 ಕೋಟಿ ನಲ್ಲಿ ನೀರು ಸಂಪರ್ಕ ಒದಗಿಸಲಾಗಿದೆ. 50 ಸಾವಿರ ಗ್ರಾಮ ಪಂಚಾಯಿತಿಗಳಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2019ರ ಆಗಸ್ಟ್‌ 15ರಂದು ಆರಂಭಿಸಿದ್ದರು. ಗ್ರಾಮೀಣ ಪ್ರದೇಶದ ಎಲ್ಲ ಮನೆಗಳಿಗೂ ನಲ್ಲಿ ನೀರು ಸಂಪರ್ಕ ನೀಡುವುದು ಈ ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಕೇಂದ್ರ ಸರ್ಕಾರವು ₹50 ಸಾವಿರ ಕೋಟಿ ಮೀಸಲು ಇರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT